Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕೆಪಿಎಸ್ಸಿ ಹಗರಣದ ತನಿಖೆಯನ್ನು...

Bidar | ಕೆಪಿಎಸ್ಸಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Sept 2026 5:55 PM IST
share
Bidar | ಕೆಪಿಎಸ್ಸಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆಗ್ರಹ

ಬೀದರ್: ಕೆಪಿಎಸ್ಸಿಯಲ್ಲಿ ನಡೆದಿರುವ ಹಗರಣದ ತನಿಖೆಯನ್ನು ಇನ್ನಷ್ಟು ಪಾರದರ್ಶಕವಾಗಿ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅರಿವು ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ವಿಶ್ವಕರ್ಮ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತನಿಖೆ ಇನ್ನಷ್ಟು ಚುರುಕುಗೊಳ್ಳಲು ಸರ್ಕಾರ ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

2009ರಿಂದ ಕೆಪಿಎಸ್ಸಿಯಲ್ಲಿ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕಿದೆ. ಬ್ಯಾಂಕ್‌ಗಳ ಮಾದರಿಯಲ್ಲಿ ಪರೀಕ್ಷೆ ನಡೆಸಿ, ನೇರ ಸಂದರ್ಶನ ಪ್ರಕ್ರಿಯೆಯನ್ನು ಕೈಬಿಡಬೇಕು. ಒಎಂಆರ್ ಶೀಟ್ ಮೂಲಕ ಪರೀಕ್ಷೆ ಬರೆಯಿಸುವ ಹಳೆಯ ಪದ್ಧತಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಕೆಪಿಎಸ್ಸಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಅವರು ಹೇಳಿದರು.

ಸಂಸ್ಥೆಯ ಗೌರವಾಧ್ಯಕ್ಷ ವಿನೋದ್ ಹೊನ್ನಾ ಮಾತನಾಡಿ, ಕೆಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಗರಣಗಳಿಂದ ವಿದ್ಯಾರ್ಥಿಗಳು ಆತಂಕ ಹಾಗೂ ನಿರಾಸೆಗೆ ಒಳಗಾಗಿದ್ದಾರೆ. ಇಂತಹ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿ, ಮತ್ತೆ ಧೈರ್ಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಂತೆ ಮಾಡುವ ನಿಟ್ಟಿನಲ್ಲಿ ಸಂಸ್ಥೆಯಿಂದ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಸಹಾಯ ಹಾಗೂ ಸಹಕಾರ ನೀಡುವುದರ ಜತೆಗೆ, ಆತಂಕಕ್ಕೊಳಗಾದ ಅವರ ಪಾಲಕರಿಗೂ ಸಾಂತ್ವನ ಮತ್ತು ಸಹಾನುಭೂತಿ ವ್ಯಕ್ತಪಡಿಸುವ ಕಾರ್ಯ ಮಾಡಲಾಗುವುದು. ಜಿಲ್ಲೆಯ ಸಮಾನ ಮನಸ್ಕರು ಈ ಕಾರ್ಯದಲ್ಲಿ ಕೈಜೋಡಿಸುವಂತೆ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಪ್ರಕಾಶ್ ಗೋದಾ, ಸದಸ್ಯರಾದ ರಾಜಕುಮಾರ್ ಸ್ವಾಮಿ ಹಾಗೂ ಸಂಜುಕುಮಾರ್ ಪಾಂಚಾಳ್ ಅವರು ಇದ್ದರು.

Tags

KPSC scamBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X