Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬಸ್ ಪ್ರಯಾಣ ದರ, ಹಾಲಿನ...

Bidar | ಬಸ್ ಪ್ರಯಾಣ ದರ, ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ಆಗ್ರಹ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ19 Nov 2026 7:18 PM IST
share
Bidar | ಬಸ್ ಪ್ರಯಾಣ ದರ, ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ಆಗ್ರಹ

ಬೀದರ್: ರಾಜ್ಯ ಸರ್ಕಾರ ಸಾರಿಗೆ ಬಸ್ ಪ್ರಯಾಣ ದರ ಹಾಗೂ ಹಾಲು ಮತ್ತು ಅದರ ಉತ್ಪನ್ನಗಳ ಬೆಲೆ ಏರಿಕೆ ಮಾಡಿರುವುದನ್ನು ಸಮಾಜವಾದಿ ಜನತಾ ಪಕ್ಷ ಹಾಗೂ ಉತ್ತರ ಕರ್ನಾಟಕ ಕಟ್ಟಡ ಮತ್ತು ಇತರೆ ಕೂಲಿ ಕಾರ್ಮಿಕರ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ಕೂಡಲೇ ದರ ಏರಿಕೆ ಆದೇಶಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿಯಿಂದಾಗಿ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ರೈತರು, ಮಹಿಳೆಯರು, ದಲಿತರು ಸೇರಿದಂತೆ ದುಡಿಯುವ ವರ್ಗದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾರಿಗೆ ಬಸ್ ಪ್ರಯಾಣ ದರವನ್ನು ಶೇ.35ರಷ್ಟು ಹೆಚ್ಚಿಸಿರುವುದು ಬಡವರು ಮತ್ತು ದುರ್ಬಲ ವರ್ಗದ ಜನರಿಗೆ ಮತ್ತಷ್ಟು ಆರ್ಥಿಕ ಹೊರೆ ಉಂಟುಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಅದೇ ರೀತಿ ಹಾಲು, ಮೊಸರು, ತುಪ್ಪ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಿಸಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸುವುದು ಕಷ್ಟಕರವಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಸಾರಿಗೆ ಬಸ್ ಪ್ರಯಾಣ ದರ ಹಾಗೂ ಹಾಲು ಮತ್ತು ಅದರ ಉತ್ಪನ್ನಗಳ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗಿದೆ.

ರಾಜ್ಯಪಾಲರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಸರ್ಕಾರದ ಗಮನಕ್ಕೆ ತರುವ ಮೂಲಕ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಮನವಿಗೆ ಸ್ಪಂದಿಸಿ ದರ ಏರಿಕೆ ಹಿಂಪಡೆಯದಿದ್ದರೆ ಜನರ ಹಿತದೃಷ್ಟಿಯಿಂದ ಹಂತ ಹಂತವಾಗಿ ಪ್ರತಿಭಟನೆ, ಧರಣಿ ಹಾಗೂ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಮಾಜವಾದಿ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಂ.ಎಸ್. ಶಿರೋಮಣಿ, ಉತ್ತರ ಕರ್ನಾಟಕ ಕಟ್ಟಡ ಮತ್ತು ಇತರೆ ಕೂಲಿ ಕಾರ್ಮಿಕರ ಟ್ರಸ್ಟ್ ಜಿಲ್ಲಾಧ್ಯಕ್ಷ ರವೀಂದ್ರ ಕೊಳ್ಳೂರ್, ಸಮಾಜವಾದಿ ಜನತಾ ಪಕ್ಷದ ರಾಜ್ಯ ಕಾರ್ಯಕಾರಿ ಸದಸ್ಯ ದಿಲೀಪ್ ಭಂಗೂರೆ, ಶಮಶೊದ್ದಿನ್, ಶುಜಾವುದ್ದಿನ್, ಗೌಸ್ ಖಾನ್, ಬಾಲಾಜಿ ಔರಾದ್ಕರ್, ರಾಜಕುಮಾರ್ ಮಾಳಗೆ, ದಶರಥ್ ಹಾಗೂ ಝರೆಪ್ಪಾ ಉಪಸ್ಥಿತರಿದ್ದರು.

Tags

Bidar‌busmilk
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X