Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಸತ್ಯನಿಷ್ಠ ಪತ್ರಿಕೋದ್ಯಮದಿಂದ...

Bidar | ಸತ್ಯನಿಷ್ಠ ಪತ್ರಿಕೋದ್ಯಮದಿಂದ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ: ಗುರುನಾಥ್ ಅಕ್ಕಣ್ಣ

ವಾರ್ತಾಭಾರತಿವಾರ್ತಾಭಾರತಿ29 July 2026 6:49 PM IST
share
Bidar | ಸತ್ಯನಿಷ್ಠ ಪತ್ರಿಕೋದ್ಯಮದಿಂದ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ: ಗುರುನಾಥ್ ಅಕ್ಕಣ್ಣ
ಹುಲಸೂರಿನಲ್ಲಿ ಪತ್ರಿಕಾ ದಿನಾಚರಣೆ

ಹುಲಸೂರ್: ಪತ್ರಿಕೋದ್ಯಮವು ಕೇವಲ ಸುದ್ದಿಗಳನ್ನು ಪ್ರಕಟಿಸುವ ವೃತ್ತಿಯಲ್ಲ, ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ. ಪತ್ರಕರ್ತರು ಯಾವುದೇ ಒತ್ತಡಕ್ಕೆ ಒಳಗಾಗದೆ ವಾಸ್ತವಾಂಶಗಳನ್ನು ಅರಿತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದಾಗ ಪ್ರಜಾಪ್ರಭುತ್ವ ಮತ್ತಷ್ಟು ಬಲಗೊಳ್ಳುತ್ತದೆ ಎಂದು ಗುರುನಾಥ್ ಅಕ್ಕಣ್ಣ ಹೇಳಿದರು.

ಪಟ್ಟಣದ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರು ತಾಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಪತ್ರಕರ್ತರು ಅನೇಕ ಸವಾಲುಗಳ ನಡುವೆಯೂ ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ. ಸತ್ಯ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಬದ್ಧತೆಯನ್ನು ಪತ್ರಿಕೋದ್ಯಮದ ಮೂಲಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗಳಿಗೂ ಬೆಳಕು ಚೆಲ್ಲುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಹೇಳಿದರು.

ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಹುಲಸೂರಿನ ಶಿವಾನಂದ ಸ್ವಾಮೀಜಿ ಮಾತನಾಡಿ, ಪತ್ರಿಕೆಗಳು ಸಮಾಜದ ಆಗುಹೋಗುಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಒಳ್ಳೆಯ ವಿಚಾರಗಳನ್ನು ಪ್ರೋತ್ಸಾಹಿಸುವ ಹಾಗೂ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿವೆ. ಪತ್ರಕರ್ತರು ಸಮಾಜದ ಹಿತದೃಷ್ಟಿಯಿಂದ ವಸ್ತುನಿಷ್ಠವಾಗಿ ಕಾರ್ಯನಿರ್ವಹಿಸಿ ಮಾಧ್ಯಮ ಕ್ಷೇತ್ರದ ಘನತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಬೇಕು ಎಂದು ಕರೆ ನೀಡಿದರು.

ತಹಸೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ಸರ್ಕಾರದ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳು ಅರ್ಹರಿಗೆ ತಲುಪುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮೀಣ ಪ್ರದೇಶಗಳ ಸಾರ್ವಜನಿಕರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವ ಮೂಲಕ ಪತ್ರಕರ್ತರು ಜನರು ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಸ್ತುನಿಷ್ಠ ವರದಿಗಾರಿಕೆಯಿಂದ ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗಬೇಕು ಎಂದು ಹೇಳಿದರು.

ಡಾ. ಭೀಮಾಶಂಕರ್ ಬಿರಾದಾರ್ ಮಾತನಾಡಿ, ಪತ್ರಕರ್ತರು ಸಮಾಜದ ಕಣ್ಣುಗಳಿದ್ದಂತೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಪರಿಶೀಲಿತ ಮಾಹಿತಿಯನ್ನೇ ಜನರಿಗೆ ತಲುಪಿಸುವ ಮೂಲಕ ಪತ್ರಿಕೋದ್ಯಮದ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ ಮಾತನಾಡಿ, ರಾಜ್ಯದಾದ್ಯಂತ ಪತ್ರಕರ್ತರ ಹಕ್ಕುಗಳು, ಗೌರವ ಮತ್ತು ಕಲ್ಯಾಣಕ್ಕಾಗಿ ಸಂಘ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಗ್ರಾಮೀಣ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವುದು ಸಂಘದ ಪ್ರಮುಖ ಉದ್ದೇಶವಾಗಿದ್ದು, ಅವರಿಗೆ ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ನಿರಂತರ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಮೆಂಟೇ ಪ್ರಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ತಾಲೂಕಿನ ಪತ್ರಕರ್ತರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾರಾಣಿ ಬೋಸ್ಲೆ, ಉಪಾಧ್ಯೆಕ್ಷೆ ಮೀರಾಬಾಯಿ ಗಾಯಕವಾಡ್, ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಸ್ವಾಮಿದಾಸ್ ನಾಗೂರೆ,‌ ಸಾಮಾಜಿಕ ಕಾರ್ಯಕರ್ತ ಅಬ್ರಹಾರ್‌ ಸೌದಾಗರ್, ಸಂತೋಷ ಚೆಟ್ಟಿ, ಸಹಾಯಕ ಕೃಷಿ ನಿರ್ದೇಶಕ ಗೌತಮ್ ವಾಗ್ಮಾರೆ, ಸಮಾಜ ಕಲ್ಯಾಣ ಅಧಿಕಾರಿ ದಿಲೀಪ್ ಉತ್ತಮ್, ಗ್ಯಾರಂಟಿ ಯೋಜನೆಗಳ ತಾಲ್ಲೂಕಾಧ್ಯಕ್ಷ ಸಿದ್ರಾಮ್ ಕಾಮಣ್ಣಾ, ಸರ್ಕಾರಿ ನೌಕರರ ಸಂಘದ ತಾಲ್ಲೂಕಾಧ್ಯಕ್ಷ ನಾಗರಾಜ್ ಹಾವಣ್ಣ, ಕೃಷಿ ಅಧಿಕಾರಿ ಆಕಾಶ್, ವೀರಭದ್ರೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶಿನಾಥ್ ಪಾರ್ಶೆಟ್ಟೆ, ಬಂಡೂರಾವ್ ಪಾಟೀಲ್ ಸೇರಿದಂತೆ ತಾಲ್ಲೂಕು ಘಟಕದ ಪತ್ರಕರ್ತರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Tags

journalismDemocracyBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X