ಬೀದರ್ | ಕಬ್ಬಿನ ಬಾಕಿ ಉಳಿದಿರುವ ಹಣ ಪಾವತಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : ಕಬ್ಬು ಸರಬರಾಜು ಮಾಡಿರುವ ರೈತರಿಗೆ ಕಬ್ಬಿನ ಬಾಕಿ ಇರುವ ಹಣ ಪಾವತಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದ್ದಾರೆ.
ಬುಧವಾರ ನಾರಂಜಾ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ಅವರು, ಸಕ್ಕರೆ ಕಾರ್ಖಾನೆಯಲ್ಲಿ ಈವರೆಗೆ ಕಬ್ಬು ನುರಿಸಿರುವ, ಸಕ್ಕರೆ ದಾಸ್ತಾನಿನ ಬಗ್ಗೆ ಪರಿಶೀಲಾನೆ ನಡೆಸಿದರು. ಕಬ್ಬಿನ ಇತರೆ ಉತ್ಪನ್ನಗಳ ಮೂಲಕ ಆದಾಯ ವೃದ್ಧಿ ಮಾಡಿಕೊಳ್ಳಲು ಸಕ್ಕರೆ ಕಾರ್ಖಾನೆಯವರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ, ಆಹಾರ ಇಲಾಖೆ ಉಪನಿರ್ದೇಶಕ ಹಾಗೂ ಬೀದರ ತಹಸೀಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story





