ಬೀದರ್ | ಕಮಲನಗರದ ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

ಬೀದರ್ : ಕಮಲನಗರದ ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದು ಕಮಲನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಕರ್ಯಗಳ ಕುರಿತು ಮಾಹಿತಿ ಪಡೆದು, ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸವಲತ್ತುಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story





