ಬೀದರ್|ಡಿ.6ರಂದು ಮನೆ ಮನೆಗೆ ಅಂಬೇಡ್ಕರ್ ಅಭಿಯಾನಕ್ಕೆ ಚಾಲನೆ

ಬೀದರ್ : ಡಿ.6ರಂದು ಡಾ. ಅಂಬೇಡ್ಕರ್ ಪರಿನಿಬ್ಬಾಣ ದಿನದ ಹಿನ್ನೆಲೆ ಬೀದರ್ ನ ಡಾ.ಅಂಬೇಡ್ಕರ್ ವೃತ್ತದಲ್ಲಿ ಮನೆ ಮನೆಗೆ ಅಂಬೇಡ್ಕರ್ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಹಾಗೂ ಅಭಿಯಾನದ ಸಂಚಾಲಕ ಮಹೇಶ್ ಗೋರನಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ್ ನ ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಡಿ.6 ರಿಂದ 2026ರ ಏ.14ರವರೆಗೆ 'ಮನೆ ಮನೆಗೆ ಅಂಬೇಡ್ಕರ್ ಅಭಿಯಾನ' ನಡೆಸಲಾಗುವುದು. ಹಾಗಾಗಿ ನಾಳೆ ಆ ಅಭಿಯಾನದ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ದೊರೆಯಲಿದೆ ಎಂದು ಹೇಳಿದ್ದಾರೆ.
ಅಭಿಯಾನಕ್ಕೆ ಭಂತೆ ವರಜ್ಯೋತಿ ಅವರು ಚಾಲನೆ ನೀಡುವರು. ಮನೆ ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ಕಾಶಿನಾಥ್ ಚೆಲ್ವಾ ಅವರು ಅಧ್ಯಕ್ಷತೆ ವಹಿಸುವರು. ಅಭಿಯಾನ ಅನುಷ್ಠಾನ ಸಮಿತಿಯ ಸರ್ವ ಪದಾಧಿಕಾರಿಗಳು ಅತಿಥಿಯಾಗಿ ಭಾಗವಹಿಸುವರು. ಆದ್ದರಿಂದ ಬುದ್ಧ, ಬಸವ, ಅಂಬೇಡ್ಕರ್ ಅನುಯಾಯಿಗಳು, ಹೋರಾಟಗಾರರು, ಸಾಹಿತಿಗಳು, ಚಿಂತಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಹೇಶ್ ಗೋರನಾಳಕರ್ ಮನವಿ ಮಾಡಿದ್ದಾರೆ.





