Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಜೂ.30ರಿಂದ ಮನೆ ಮನೆ ಮತದಾರರ...

Bidar | ಜೂ.30ರಿಂದ ಮನೆ ಮನೆ ಮತದಾರರ ಸಮೀಕ್ಷೆ: ಬಿಎಲ್‌ಒಗಳಿಗೆ ಸಹಕರಿಸಲು ಡಿಸಿ ಶಿಲ್ಪಾ ಶರ್ಮಾ ಮನವಿ

ವಾರ್ತಾಭಾರತಿವಾರ್ತಾಭಾರತಿ3 Jun 2026 8:21 PM IST
share
Bidar | ಜೂ.30ರಿಂದ ಮನೆ ಮನೆ ಮತದಾರರ ಸಮೀಕ್ಷೆ: ಬಿಎಲ್‌ಒಗಳಿಗೆ ಸಹಕರಿಸಲು ಡಿಸಿ ಶಿಲ್ಪಾ ಶರ್ಮಾ ಮನವಿ

ಬೀದರ್: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ತೀವ್ರ ಪರಿಷ್ಕರಣೆ-2026 ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಮನೆ ಮನೆ ಸಮೀಕ್ಷೆ ನಡೆಸಿ ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ದೋಷರಹಿತ ಹಾಗೂ ಪಾರದರ್ಶಕಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಗಳಿಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಪರಿಶೀಲಿಸಲಿದ್ದಾರೆ. ಈ ಮಾಹಿತಿಯ ಆಧಾರದ ಮೇಲೆ ಮತದಾರರ ಪಟ್ಟಿಯ ತಿದ್ದುಪಡಿ ಹಾಗೂ ನವೀಕರಣ ಕಾರ್ಯ ಕೈಗೊಳ್ಳಲಾಗುವುದು ಎಂದರು.

2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದ್ದು, ಜೂನ್ 20ರಿಂದ 29ರವರೆಗೆ ತರಬೇತಿ ಹಾಗೂ ಪೂರ್ವಸಿದ್ಧತಾ ಕಾರ್ಯಗಳು ನಡೆಯಲಿವೆ. ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆ ಸಮೀಕ್ಷೆ ನಡೆಯಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಮೀಕ್ಷೆ ವೇಳೆ ಹೊಸ ಮತದಾರರ ಸೇರ್ಪಡೆ, ಸ್ಥಳಾಂತರಗೊಂಡ ಮತದಾರರ ವಿವರಗಳ ನವೀಕರಣ ಹಾಗೂ ಮೃತರ ಹೆಸರುಗಳ ತೆರವು ಸೇರಿದಂತೆ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು. ಮತದಾರರು ಅಗತ್ಯ ದಾಖಲೆಗಳನ್ನು ಒದಗಿಸಿ ಬಿಎಲ್‌ಒಗಳಿಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

2025ರ ಜನವರಿ 6ರಂದು ಪ್ರಕಟವಾದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಬೀದರ್ ಜಿಲ್ಲೆಯಲ್ಲಿ 1,528 ಮತಗಟ್ಟೆಗಳಿದ್ದು, 7,40,462 ಪುರುಷರು ಹಾಗೂ 7,05,983 ಮಹಿಳೆಯರು ಸೇರಿದಂತೆ ಒಟ್ಟು 14,46,445 ಮತದಾರರು ನೋಂದಾಯಿತರಾಗಿದ್ದಾರೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಮಹತ್ವದ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರು, ರಾಜಕೀಯ ಪಕ್ಷಗಳು ಹಾಗೂ ಮತದಾರರು ಸಹಕರಿಸುವ ಮೂಲಕ ನಿಖರ ಮತ್ತು ಪಾರದರ್ಶಕ ಮತದಾರರ ಪಟ್ಟಿಯನ್ನು ರೂಪಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ. ಕರಾಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X