ಬೀದರ್ | ಕೇಂದ್ರ ಬಸ್ ನಿಲ್ದಾಣದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ

ಬೀದರ್ : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 7 ಅಡಿ ಎತ್ತರದ ಭಾವಚಿತ್ರ ಅನಾವರಣ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗದ ಪ್ರಧಾನ ಕಾರ್ಯದರ್ಶಿ ಅರ್ಜುನ್ ಸಾಗರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗದ ವತಿಯಿಂದ 69ನೇ ಅಶೋಕ ವಿಜಯದಶಮಿ ದಿನದ ನಿಮಿತ್ಯ ಭಾರತದಲ್ಲಿ ಬೌದ್ಧ ಧರ್ಮದ ಪುನರುಜ್ಜೀವನದ ರೂವಾರಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 7 ಅಡಿ ಎತ್ತರದ ಭಾವಚಿತ್ರ ಅನಾವರಣ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಡಾ. ಅಂಬೇಡ್ಕರ್ ಅವರ ಭಾವಚಿತ್ರವು ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಅನೀಲಕುಮಾರ್ ಬೆಲ್ದಾರ್ ಹಾಗೂ ಡಿಎಸ್ಎಸ್ ಜಿಲ್ಲಾ ಸಂಚಾಲಕ ಬಾಬುರಾವ್ ಪಾಸ್ವಾನ್ ಅವರು ಜಂಟಿಯಾಗಿ ಅನಾವರಣ ಮಾಡಿದರು ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆರ್ ಪಿ ಐ (ಅಂಬೇಡ್ಕರ್) ಪಕ್ಷದ ರಾಜ್ಯಾಧ್ಯಕ್ಷ ಮಹೇಶ್ ಗೋರನಾಳಕರ್, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ್ ಮಾಳಗೆ, ನ್ಯಾಯವಾದಿ ಗೊರಖಮಾಥ ಶಿಂಧೆ, ದಲಿತ ಸೇನೆ ಜಿಲ್ಲಾಧ್ಯಕ್ಷ ಶ್ರೀಪತರಾವ್ ದಿನೆ, ಡಿಎಸ್ಎಸ್ ಜಿಲ್ಲಾ ಸಂಚಾಲಕ ಶಿವಕುಮಾರ್ ನಿಲಿಕಟ್ಟಿ, ರಾಜಕುಮಾರ್ ಕಾಂಬಳೆ, ಅರುಣ್ ಪಟೇಲ್, ಬಸವರಾಜ್ ಮಾಳಗೆ, ಜೈಪ್ರಕಾಶ್ ಬೌಧ್ದೆ, ರಾಜಕುಮಾರ್ ಗಾದಗಿ, ಶಿವಕುಮಾರ್ ಗಾಯಕವಾಡ್, ಅರ್ಜುನ್ ಸಾಗರ್, ಶಿವಶಂಕರ್ ಬೌಧ್ದೆ, ರಾಹುಲ್ ಕಂಟಿ, ಮಾರುತಿ ಭಂದಾರೆ, ಸಂಜುಕುಮಾರ್ ಹುಷಾರೆ, ಕಲ್ಲಪ್ಪಾ ವನಗೆ ಹಾಗೂ ವಿಜಯಪ್ರಕಾಶ್ ಶಿಂಧೆ ಉಪಸ್ಥಿತರಿದ್ದರು.







