ಬೀದರ್ | ಸಾವಳಿ ಗ್ರಾಮದ ಕಾಳಜಿ ಕೇಂದ್ರಕ್ಕೆ ನ್ಯಾ.ಪ್ರಕಾಶ್ ಅರ್ಜುನ್ ಬನಸೋಡೆ ಭೇಟಿ

ಬೀದರ್ : ಸಾವಳಿ ಗ್ರಾಮದ ಕಾಳಜಿ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಅರ್ಜುನ್ ಬನಸೋಡೆ ಅವರು ಇಂದು ಭೇಟಿ ನೀಡಿ ಕೇಂದ್ರದಲ್ಲಿರುವ ಜನರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು.
ಸಾವಳಿ ಗ್ರಾಮದ ಮನೆಗಳಲ್ಲಿ ನೀರು ಹೋಗಿ ಅಲ್ಲಿನ ಜನರಿಗೆ ತೊಂದರೆಯಾಗಿರುವ ನಿಮಿತ್ಯ ಸ್ಥಳಕ್ಕೆ ಭೇಟಿ ನೀಡಿದರು. ನಂತರ ಕಮಲನಗರ್ ತಾಲೂಕಿನ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ತಹಶೀಲ್ದಾರರು ಜನರಿಗೆ ಸೂಕ್ತ ರಕ್ಷಣೆ ಒದಗಿಸಿರುವುದನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಮಲನಗರ್ ತಾಲೂಕಿನ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಕಮಲನಗರ ಮತ್ತು ಠಾಣಾಕುಶನೂರ್ ಪೋಲಿಸ್ ಠಾಣೆಯ ಪಿಎಸ್ಐ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





