Bidar | ಪಶುವೈದ್ಯಕೀಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ.ಎ.ಟಿ.ರಾಮಚಂದ್ರ ನಾಯ್ಕ್ ಅಧಿಕಾರ ಸ್ವೀಕಾರ

ಬೀದರ್: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ. ಎ.ಟಿ. ರಾಮಚಂದ್ರ ನಾಯ್ಕ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯಪಾಲರ ಆದೇಶದ ಮೇರೆಗೆ ಅ.15ರಂದು ಅವರು ಅಧಿಕಾರ ವಹಿಸಿಕೊಂಡರು. ಈ ಹಿಂದೆ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕೆ.ಸಿ. ವೀರಣ್ಣ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಾ. ರಾಮಚಂದ್ರ ನಾಯ್ಕ್ ಅವರಿಗೆ ಪ್ರಭಾರ ಕುಲಪತಿಯ ಜವಾಬ್ದಾರಿ ವಹಿಸಲಾಗಿದೆ.
ಡಾ. ಎ.ಟಿ. ರಾಮಚಂದ್ರ ನಾಯ್ಕ್ ಅವರು ಮಂಗಳೂರಿನ ಮೀನುಗಾರಿಕೆ ಮಹಾವಿದ್ಯಾಲಯದಲ್ಲಿ 25 ವರ್ಷಗಳಿಗೂ ಅಧಿಕ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದು, ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಅನುಭವ ಹೊಂದಿದ್ದಾರೆ.
ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಎಲ್ಲ ಡೀನ್ಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
Next Story




