Bidar | ಕುಡಿಯುವ ನೀರಿನ ಸಮಸ್ಯೆ : ವಿವಿಧ ಗ್ರಾಮಗಳಿಗೆ ಡಿಸಿ ಶಿಲ್ಪಾ ಶರ್ಮಾ ಭೇಟಿ

ಬೀದರ್ : ಬೇಸಿಗೆಯ ತೀವ್ರತೆಯಿಂದಾಗಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಹಿರಿಯ ಅಧಿಕಾರಿಗಳು ಶನಿವಾರ ಔರಾದ್ ತಾಲೂಕಿನ ಸೊರಹಳ್ಳಿ, ಜಂಬಗಿ, ಮಹಾರಾಜವಾಡಿ, ವಿಜಯನಗರ್ ತಾಂಡಾ, ಏಕಲಾರ್ ತಾಂಡಾ, ಕಿರುಗುನವಾಡಿ, ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳು ಗ್ರಾಮಸ್ಥರೊಂದಿಗೆ ಚರ್ಚಿಸಿದ ನಂತರ ಬೇಸಿಗೆಯಲ್ಲಿ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಔರಾದ್ ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಸಹಾಯಕ ಇಂಜಿನೀಯರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Next Story




