Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವೃದ್ಧಾಪ್ಯ, ವಿಧವೆ, ಅಂಗವಿಕಲರ...

Bidar | ವೃದ್ಧಾಪ್ಯ, ವಿಧವೆ, ಅಂಗವಿಕಲರ ವೇತನ ಬಿಡುಗಡೆಗೆ ಡಿಎಸ್‌ಎಸ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Jun 2026 5:53 PM IST
share
Bidar | ವೃದ್ಧಾಪ್ಯ, ವಿಧವೆ, ಅಂಗವಿಕಲರ ವೇತನ ಬಿಡುಗಡೆಗೆ ಡಿಎಸ್‌ಎಸ್ ಒತ್ತಾಯ

ಬೀದರ್: ಸರ್ಕಾರದಿಂದ ವೃದ್ಧರು, ವಿಧವೆಯರು ಹಾಗೂ ಅಂಗವಿಕಲರಿಗೆ ನೀಡಲಾಗುತ್ತಿರುವ ಸಾಮಾಜಿಕ ಭದ್ರತಾ ವೇತನಗಳು ಹಲವು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದೇ ಇರುವುದರಿಂದ ಬಡ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಶಿವರಾಜ್ ತಡಪಳ್ಳಿ ಒತ್ತಾಯಿಸಿದ್ದಾರೆ.

ಈ ಕುರಿತು ಬುಧವಾರ ಬೀದರ್ ತಹಸೀಲ್ದಾರರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ವೃದ್ಧಾಪ್ಯ ವೇತನ, ವಿಧವೆ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಹಣ ಫಲಾನುಭವಿಗಳ ಬ್ಯಾಂಕ್ ಹಾಗೂ ಅಂಚೆ ಖಾತೆಗಳಿಗೆ ಸಕಾಲದಲ್ಲಿ ಜಮೆಯಾಗುತ್ತಿಲ್ಲ ಎಂದು ದೂರಿದ್ದಾರೆ.

ಸಾವಿರಾರು ಬಡ ಕುಟುಂಬಗಳು ಈ ಯೋಜನೆಗಳ ಮೇಲೆ ಅವಲಂಬಿತವಾಗಿದ್ದು, ಪ್ರತಿ ತಿಂಗಳು ದೊರೆಯುವ ವೇತನದಿಂದಲೇ ಜೀವನ ನಿರ್ವಹಿಸುತ್ತಿವೆ. ಆದರೆ ವೇತನ ಬಿಡುಗಡೆ ವಿಳಂಬವಾಗುತ್ತಿರುವುದರಿಂದ ಫಲಾನುಭವಿಗಳು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.

ವೇತನದ ಮಾಹಿತಿ ಪಡೆಯಲು ಹಾಗೂ ಸಮಸ್ಯೆ ಪರಿಹರಿಸಿಕೊಳ್ಳಲು ವೃದ್ಧರು, ವಿಧವೆಯರು ಮತ್ತು ಅಂಗವಿಕಲರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ತಹಸೀಲ್ದಾರ್ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಫಲಾನುಭವಿಗಳ ಖಾತೆಗಳಿಗೆ ವೇತನವನ್ನು ನಿಯಮಿತವಾಗಿ ಹಾಗೂ ಸಕಾಲದಲ್ಲಿ ಜಮಾ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಜೊತೆಗೆ ಬಾಕಿ ಇರುವ ಎಲ್ಲಾ ವೇತನವನ್ನು ಕೂಡಲೇ ಬಿಡುಗಡೆಗೊಳಿಸಿ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಒಂದು ವೇಳೆ ವೇತನ ಬಿಡುಗಡೆ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದರೆ, ತಹಸೀಲ್ದಾರ್ ಕಚೇರಿ ಎದುರು ತಮಟೆ (ಹಲಗೆ) ಬಾರಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ಎಚ್ಚರಿಕೆ ನೀಡಿದೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X