Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಮಾ. 25 ರಂದು ಈದ್ ಮಿಲನ್...

Bidar | ಮಾ. 25 ರಂದು ಈದ್ ಮಿಲನ್ ಸದ್ಭಾವನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ7 March 2026 8:21 PM IST
share
Bidar | ಮಾ. 25 ರಂದು ಈದ್ ಮಿಲನ್ ಸದ್ಭಾವನಾ ಕಾರ್ಯಕ್ರಮ
ವಿಸ್ಡ್ಂ ಕಾಲೇಜಿನಲ್ಲಿ ನಡೆದ ಜಿಲ್ಲಾ ಸದ್ಭಾವನಾ ಮಂಚ್ ಸಭೆಯಲ್ಲಿ ನಿರ್ಧಾರ

ಬೀದರ್: ಜಿಲ್ಲಾ ಸದ್ಭಾವನಾ ಮಂಚ್, ಜಮಾ ಅತೆ ಇಸ್ಲಾಮಿ ಹಿಂದ್ ಹಾಗೂ ರಾಬ್ತಾ ಎ ಮಿಲ್ಲತ್ ಸಹಯೋಗದಲ್ಲಿ ಮಾರ್ಚ್ 25ರಂದು ಈದ್ ಮಿಲನ್ ಸದ್ಭಾವನಾ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.

ನಗರದ ವಿಸ್ಡಮ್ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಸದ್ಭಾವನಾ ಮಂಚ್ ಅಧ್ಯಕ್ಷ ಗುರುನಾಥ್ ಗಡ್ಡೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಈದ್ ಮಿಲನ್ ಸದ್ಭಾವನಾ ಕಾರ್ಯಕ್ರಮಕ್ಕೆ ಎಲ್ಲ ಧರ್ಮಗಳ ಗುರುಗಳನ್ನು ಆಹ್ವಾನಿಸುವುದರ ಜೊತೆಗೆ ವಿವಿಧ ಸಮುದಾಯಗಳ ಜನರನ್ನು ಕೂಡ ಒಂದೇ ವೇದಿಕೆಯಲ್ಲಿ ಸೇರಿಸುವಂತೆ ಸಭೆಯಲ್ಲಿ ಪ್ರಮುಖರು ಸಲಹೆ ನೀಡಿದರು.

ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡಲು ಸದ್ಭಾವನಾ ಸಭೆಗಳನ್ನು ನಿರಂತರವಾಗಿ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸದ್ಭಾವನಾ ಮಂಚ್ ಸದಸ್ಯರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಉತ್ತಮ ಬಾಂಧವ್ಯ ಹೊಂದಬೇಕು. ಸಮಾಜದಲ್ಲಿ ಪ್ರೀತಿ, ವಿಶ್ವಾಸ ಹಾಗೂ ಭ್ರಾತೃತ್ವದ ವಾತಾವರಣ ನಿರ್ಮಿಸುವ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.

ಸತ್ಯದ ಪರ ಧ್ವನಿ ಎತ್ತಿ ದ್ವೇಷ ಮತ್ತು ಅಶಾಂತಿ ಹರಡದಂತೆ ಯುವಕರಿಗೆ ತಿಳಿಹೇಳಬೇಕು. ಸಣ್ಣಪುಟ್ಟ ಘಟನೆಗಳನ್ನು ಧರ್ಮ ಅಥವಾ ಜಾತಿ ಸಂಘರ್ಷಗಳಾಗಿ ಪರಿವರ್ತಿಸದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಅಹಿತಕರ ಘಟನೆ ನಡೆದರೆ ಅದನ್ನು ಸಮಾಜದಲ್ಲಿ ಹರಡದೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಯುವಕರು ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಫ.ಗು. ಹಳಕಟ್ಟಿ ಪ್ರಶಸ್ತಿಗೆ ಭಾಜನರಾದ ಗುರುನಾಥ್ ಗಡ್ಡೆ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಸದ್ಭಾವನಾ ಮಂಚ್ ಸಹ ಸಂಚಾಲಕ ಮುಹಮ್ಮದ್ ನಿಜಾಮುದ್ದೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜು ವತಿಯಿಂದ ಇಫ್ತಾರ್ ಕೂಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಶ್ರೀಕಾಂತ್ ಸ್ವಾಮಿ, ಫಾದರ್ ಲೂಯಿಸ್, ಡಾ. ಅಬ್ದುಲ್ ಖದೀರ್, ವಿಠ್ಠಲದಾಸ್ ಪ್ಯಾಗೆ, ಡಾ. ಸಿ. ಆನಂದರಾವ್, ಡಾ. ದೀಪಾ ನಂದಿ, ಚೇತನಾ ಮೋಹನ್, ಓಂಪ್ರಕಾಶ್ ರೊಟ್ಟೆ, ಜಗದೀಶ್ ಬಿರಾದಾರ್, ಮಹೇಶ್ ಗೋರನಾಳಕರ್, ವಿಜಯಕುಮಾರ್, ಮಚ್ಚೇಂದ್ರ ವಾಘಮಾರೆ, ಸೈಯದ್ ಇರ್ಫಾನ್, ಆಸ್ಮಾ ಸುಲ್ತಾನಾ, ಬಿಲ್ಕಿಸ್ ಫಾತಿಮಾ, ಸಿದ್ದು ಫುಲಾರಿ, ಸಂತೋಷ್ ಜೋಳದಾಪಕೆ ಹಾಗೂ ವೀರಭದ್ರಪ್ಪ ಉಪ್ಪಿನ್ ಇದ್ದರು. ವಿಸ್ಡ್ಂ ಕಾಲೇಜಿನ ಅಧ್ಯಕ್ಷ ಮುಹಮ್ಮದ್ ಆಸಿಫುದ್ದೀನ್ ವಂದಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X