ಬೀದರ್ | ವಿದ್ಯುತ್ ಆಘಾತ : ಬಾಲಕಿ ಮೃತ್ಯು

ಸಾಂದರ್ಭಿಕ ಚಿತ್ರ
ಬೀದರ್ : ಹೊಸದಾಗಿ ನಿರ್ಮಾಣ ಮಾಡಲಾದ ಮನೆಗೆ ನೀರು ಹಾಕಲು ಮೋಟಾರು ಆನ್ ಮಾಡಲು ಹೋದ ವೇಳೆ ವಿದ್ಯುತ್ ಆಘಾತದಿಂದ 8ನೇ ತರಗತಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಹುಲಸೂರ್ ತಾಲ್ಲೂಕಿನ ತೊಗಲೂರ್ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಪಲ್ಲವಿ ರಾಜೇಂದ್ರ ದೆವಗೊಂಡ್(15) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಹೊಸ ಮನೆಗೆ ನೀರು ಹಾಕಲು ನೀರಿನ ಮೋಟರ್ ಆನ್ ಮಾಡಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಆಘಾತದಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಹುಲಸೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Next Story





