Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಪ್ರತಿಯೊಬ್ಬ ವಿದ್ಯಾರ್ಥಿಯು...

ಬೀದರ್ | ಪ್ರತಿಯೊಬ್ಬ ವಿದ್ಯಾರ್ಥಿಯು ಕಡ್ಡಾಯವಾಗಿ ತಲಾ 10 ಸಸಿ ನೆಡಬೇಕು : ಜಿ.ಕೆ.ಬಿರಾದಾರ್

ವಾರ್ತಾಭಾರತಿವಾರ್ತಾಭಾರತಿ7 Nov 2025 7:36 PM IST
share
ಬೀದರ್ | ಪ್ರತಿಯೊಬ್ಬ ವಿದ್ಯಾರ್ಥಿಯು ಕಡ್ಡಾಯವಾಗಿ ತಲಾ 10 ಸಸಿ ನೆಡಬೇಕು : ಜಿ.ಕೆ.ಬಿರಾದಾರ್

ಬೀದರ್ : ಪ್ರತಿಯೊಬ್ಬ ವಿದ್ಯಾರ್ಥಿಯು ತಲಾ 10 ಸಸಿಗಳನ್ನು ಕಡ್ಡಾಯವಾಗಿ ನೆಡಬೇಕು. ಇದರಿಂದ ಶುದ್ಧ ಗಾಳಿ ಸಿಗುತ್ತದೆ. ಪರಿಸರ ಚೆನ್ನಾಗಿದ್ದರೆ ಆರೋಗ್ಯವೂ ಸದೃಢವಾಗಿರುತ್ತದೆ ಎಂದು ಬೀದರ್ ನ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಕೆ.ಬಿರಾದಾರ್ ಅವರು ಹೇಳಿದರು.

ನಗರದ ನೌಬಾದ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹಾಗೂ ಶಾಹು ಮಹಾರಾಜ ಪಿಯು ಕಾಲೇಜಿನಲ್ಲಿ ನಡೆದ 'ಶುದ್ಧ ಮತ್ತು ಮಾಲಿನ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ' ಎಂಬ ಘೋಷ ವಾಕ್ಯದಡಿ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಹೀಗಾಗಿ, ನಾಳಿನ ಜೀವನಕ್ಕಾಗಿ ಇಂದೇ ಎಲ್ಲರೂ ಸಸಿ ನೆಟ್ಟು, ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ಸಿಗುವಂತೆ ಮಾಡೋಣ ಎಂದು ಸಲಹೆ ನೀಡಿದರು.

ಅಶುದ್ಧ ಗಾಳಿಯಿಂದಾಗಿ ಶ್ವಾಸಕೋಶ ಸಂಬಂಧಿ ರೋಗಗಳ ಜೊತೆಗೆ ಇನ್ನಿತರೆ ರೋಗಗಳು ಉಲ್ಭಣಿಸುತ್ತವೆ. ಅವೆಲ್ಲವನ್ನೂ ತಡೆಯಬೇಕೆಂದರೆ ಗಿಡ, ಮರ ನೆಟ್ಟು ಬೆಳೆಸುವುದೊಂದೇ ದಾರಿ ಉಳಿದಿದೆ. ಮನೆಯ ಸುತ್ತಲೂ ಹಾಗೂ ಎಲ್ಲೇ ಖಾಲಿ ಜಾಗ ಕಂಡರೂ ಸಸಿಗಳನ್ನು ನೆಡುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ಮೋಟಾರು ವಾಹನ ನಿರೀಕ್ಷಕ ಅನಂತುರಾಮ್ ಅವರು ಮಾತನಾಡಿ, ಶಬ್ದ ಮಾಲಿನ್ಯ, ಜಲ ಮಾಲಿನ್ಯ, ಪರಿಸರ ಮಾಲಿನ್ಯ, ಭೂ ಮಾಲಿನ್ಯ ಎಲ್ಲವನ್ನೂ ತಡೆಯಲು ಎಕೈಕ ಮಾರ್ಗ ಎಂದರೆ ಸಸಿಗಳು ನೆಟ್ಟು, ಪೋಷಣೆ ಮಾಡುವುದು. ಹೀಗಾಗಿ, ಈ ನಿಟ್ಟಿನಲ್ಲಿ ಯುವಕರು ಜಾಗೃತರಾಗಬೇಕು ಎಂದರು.

ರಾಜ್ಯ ಮೋಟಾರು ವಾಹನ ತರಬೇತಿ ಶಾಲೆಯ ಸಂಘಟನಾ ಕಾರ್ಯದರ್ಶಿ ಶಿವರಾಜ ಜಮಾದಾರ್ ಖಾಜಾಪುರ್ ಅವರು ಮಾತನಾಡಿ, ಜನ್ಮ ದಿನ ಕಾರ್ಯಕ್ರಮ, ಮನೆ ಶಾಂತಿ, ಮದುವೆ, ಜಾವಳ ಹೀಗೆ ಯಾವುದೇ ಸಂಭ್ರಮದ ಕಾರ್ಯಕ್ರಮಗಳಲ್ಲಿ ಸಸಿಗಳನ್ನು ವಿತರಿಸುವ ಪರಿಪಾಠ ರೂಢಿಸಿಕೊಳ್ಳಬೇಕು. ಈ ದಿನಗಳಲ್ಲಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಡೈಮಂಡ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ವೈ.ಮಾಧವರಾವ್, ಕಚೇರಿ ಅಧೀಕ್ಷಕ ಮಲ್ಲಿಕಾರ್ಜುನ್ ಎಂ., ಬೀದರ್ ಮೋಟಾರ್ ಡ್ರೈವಿಂಗ್ ಸ್ಕೂಲ್ ಅದ್ಯಕ್ಷ ಪ್ರಕಾಶ್ ಗುಮ್ಮೆ, ಶಾಹು ಮಹಾರಾಜ್ ಪಿಯು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ನಿಲಂಗೆ, ಉಪ ಪ್ರಾಂಶುಪಾಲ ಸುನಂದಾ ಬಿರಾದಾರ್, ವಿಕಾಸ ಕಾಂಬಳೆ ಹಾಗೂ ಆರ್‌ಟಿಒ ಕಚೇರಿ ಮತ್ತು ಕಾಲೇಜು ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X