Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ...

Bidar | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಡಾ.ಗಿರೀಶ್ ಬದೋಲೆ

ವಾರ್ತಾಭಾರತಿವಾರ್ತಾಭಾರತಿ1 Aug 2026 7:32 PM IST
share
Bidar | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಡಾ.ಗಿರೀಶ್ ಬದೋಲೆ

ಬೀದರ್‌: ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ದುಶ್ಚಟಗಳನ್ನು ತೊರೆದು ಆರೋಗ್ಯಕರ ಹಾಗೂ ನೆಮ್ಮದಿಯ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಕರೆ ನೀಡಿದರು.

ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ (ಬೆಂಗಳೂರು), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿಜಯ ಮಹಾಂತ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧೂಮಪಾನ, ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲ, ಕುಟುಂಬದ ನೆಮ್ಮದಿಯೂ ಹಾಳಾಗಿ ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಹಾಗೂ ಅಮಲಿನಲ್ಲಿ ಅಪರಾಧ ಕೃತ್ಯ ಎಸಗುವುದರಿಂದ ಸಾರ್ವಜನಿಕರ ಜೀವಕ್ಕೂ ಅಪಾಯ ಉಂಟಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

“ನಿಮ್ಮ ಆಸ್ತಿ-ಪಾಸ್ತಿ ಅಥವಾ ಹಣ ಬೇಡ, ನಿಮ್ಮಲ್ಲಿರುವ ದುಶ್ಚಟಗಳನ್ನು ನೀಡಿ, ಸುಖಮಯ ಜೀವನ ನಡೆಸಿ” ಎಂದು ಡಾ. ಮಹಾಂತ ಅಪ್ಪನವರು ನೀಡಿದ್ದ ಸಂದೇಶವನ್ನು ಸ್ಮರಿಸಿದ ಅವರು, ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸಿ ವ್ಯಸನಮುಕ್ತ ಸಮಾಜದ ರಾಯಭಾರಿಗಳಾಗಬೇಕು. ಮಹಾಂತ ಶಿವಯೋಗಿಗಳ ಕನಸಿನಂತೆ ಪ್ರತಿಯೊಂದು ಮನೆ ಮತ್ತು ಮನಸ್ಸು ವ್ಯಸನಮುಕ್ತವಾಗಬೇಕು ಎಂದು ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ, ಯುವಕರಲ್ಲಿ ಹೆಚ್ಚುತ್ತಿರುವ ದುಶ್ಚಟಗಳನ್ನು ನಿಯಂತ್ರಿಸಲು ಯುವಜನತೆ ಮುಂಚೂಣಿಗೆ ಬರಬೇಕು. ದುಶ್ಚಟಗಳಿಂದ ಬಳಲುತ್ತಿರುವವರಿಗೆ ಪ್ರೇರಣೆಯಾಗಬೇಕು. ಇಂದಿನ ಯುವಕರು ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಸುಸಂಸ್ಕೃತ ಹಾಗೂ ಆರ್ಥಿಕವಾಗಿ ಸಬಲ ನಾಗರಿಕರಾಗಿ ಬೆಳೆಯಬೇಕು ಎಂದು ಹೇಳಿದರು.

ಸರ್ಕಾರ ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಟ್ಟಡಗಳ 100 ಮೀಟರ್ ವ್ಯಾಪ್ತಿಯನ್ನು ತಂಬಾಕು ಮತ್ತು ಇತರೆ ಮಾದಕ ವಸ್ತುಗಳ ಮಾರಾಟ ನಿಷೇಧಿತ ಪ್ರದೇಶವೆಂದು ಘೋಷಿಸಿರುವುದನ್ನು ಉಲ್ಲೇಖಿಸಿದ ಅವರು, ದುಶ್ಚಟಗಳಿಂದ ಬಳಲುವವರನ್ನು ಮುಕ್ತಗೊಳಿಸಲು ಸಮಾಜದ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು. ದೇಶದ ಭವಿಷ್ಯ ಯುವಕರ ಕೈಯಲ್ಲಿದ್ದು, ಅವರು ಸದೃಢರಾಗಿದ್ದರೆ ದೇಶವೂ ಆರ್ಥಿಕವಾಗಿ ಬಲಿಷ್ಠವಾಗಲಿದೆ ಎಂದು ಹೇಳಿದರು.

ಸಾಹಿತಿ ಹಾಗೂ ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕ ಮಾಣಿಕ್ ನೇಳಗೆ ಮಾತನಾಡಿ, ಮಾನವ ಸಮಾಜ ದಾರಿ ತಪ್ಪಿದಾಗ ಗೌತಮ ಬುದ್ಧ ಮತ್ತು ಬಸವಣ್ಣನವರಂತಹ ಮಹಾತ್ಮರು ಸಮಾಜಕ್ಕೆ ದಾರಿದೀಪರಾದಂತೆ, ಆಧುನಿಕ ಕಾಲದಲ್ಲಿ ದುಶ್ಚಟಗಳ ನಿರ್ಮೂಲನೆಗಾಗಿ ಡಾ. ಮಹಾಂತ ಅಪ್ಪನವರು ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

1972ರ ಭೀಕರ ಬರಗಾಲದ ಸಂದರ್ಭದಲ್ಲಿ ಇಳಕಲ್ ಮಠದ ವತಿಯಿಂದ ಉಚಿತ ಗಂಜಿ ಕೇಂದ್ರಗಳನ್ನು ಆರಂಭಿಸಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಾದ ಮಹಾಂತ ಅಪ್ಪನವರ ಮಾನವೀಯ ಸೇವೆಯನ್ನು ಅವರು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

SocietyBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X