Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕನ್ನಡ ಸಂಸ್ಕೃತಿ ಉಳಿವಿಗೆ...

ಬೀದರ್ | ಕನ್ನಡ ಸಂಸ್ಕೃತಿ ಉಳಿವಿಗೆ ಎಲ್ಲರ ಸಹಕಾರ ಅಗತ್ಯ: ಸಿದ್ರಾಮ್ ಶಿಂಧೆ

ವಾರ್ತಾಭಾರತಿವಾರ್ತಾಭಾರತಿ29 May 2026 9:48 PM IST
share
ಬೀದರ್ | ಕನ್ನಡ ಸಂಸ್ಕೃತಿ ಉಳಿವಿಗೆ ಎಲ್ಲರ ಸಹಕಾರ ಅಗತ್ಯ: ಸಿದ್ರಾಮ್ ಶಿಂಧೆ

ಬೀದರ್ : ಜಿಲ್ಲೆಯಲ್ಲಿ ಸಂಸ್ಕೃತಿಯನ್ನು ಗಟ್ಟಿಯಾಗಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಶಿಂಧೆ ತಿಳಿಸಿದರು.

ನಗರದ ಡಾ. ಚೆನ್ನಬಸವ ಪಟ್ಟದೇವರು ರಂಗ ಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಾಂಸ್ಕೃತಿಕ ಪ್ರಚಾರ ಕಾರ್ಯ ಸಮಿತಿ ಮಳಚಾಪೂರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಸಾಯಂಕಾಲ ಸಂಗೀತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಸಾಂಸ್ಕೃತಿಕ ಪ್ರಚಾರ ಕಾರ್ಯ ಸಮಿತಿಯು ಜಿಲ್ಲೆಯಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ವದ ಕಾರ್ಯ ಮಾಡುತ್ತಿದೆ. ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ವಿವಿಧ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ್ ಸೊನಾರೆ ಅವರು ಮಾತನಾಡಿ, ಕಲಾವಿದರು ಸ್ವಾಭಿಮಾನಿಗಳಾಗಬೇಕು. ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಗೌರವ ನೀಡಿದರೆ ಉತ್ತಮ ಬದುಕು ಸಾಧ್ಯವಾಗುತ್ತದೆ. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಬೌದ್ಧ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಎಸ್.ಎಂ.ಜನವಾಡಕರ್ ಅವರು ಮಾತನಾಡಿ, ಮಾನವ ಹುಟ್ಟಿದ್ದಾಗಲೇ ಜಾನಪದವು ಜನ್ಮ ತಾಳಿದೆ. ಜಾನಪದವನ್ನು ಉಳಿಸಿ ಬೆಳೆಸುತ್ತಿರುವವರು ಗ್ರಾಮೀಣ ಭಾಗದ ಜನರಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಮಾರು 12 ಸಾಂಸ್ಕೃತಿಕ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಶುಭ ಕೋರಲಾಯಿತು. ಪತ್ರಕರ್ತರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ರಮೇಶ ದೊಡ್ಡಿ ಮಳಚಾಪೂರ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ್‌ ಅತಿವಾಳೆ, ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಟ್ರಸ್ಟ್ ಅಧ್ಯಕ್ಷ ಎಂ.ಎಸ್. ಮನೋಹರ್, ಹಿರಿಯ ಸಾಹಿತಿ ರಾಮಚಂದ್ರ ಗಣಾಪೂರ್, ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ್ ಗೋರನಾಳಕರ್, ಮಳಚಾಪೂರ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರು ರಾಮಶೆಟ್ಟಿ, ಕರ್ನಾಟಕ ಜಾನಪದ ಪರಿಷತ್ತು ತಾಲೂಕಾಧ್ಯಕ್ಷ ಎಸ್.ಬಿ. ಕುಚಬಾಳ್ ಹಾಗೂ ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ್ ಮಾಳಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X