Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬರಪೀಡಿತ ಪಟ್ಟಿಯಿಂದ ಕಮಲನಗರ...

Bidar | ಬರಪೀಡಿತ ಪಟ್ಟಿಯಿಂದ ಕಮಲನಗರ ಕೈಬಿಟ್ಟಿರುವುದು ಖಂಡನೀಯ: ಪೂಜಾ ಬೆಲ್ಲೆ

ವಾರ್ತಾಭಾರತಿವಾರ್ತಾಭಾರತಿ27 Aug 2026 7:19 PM IST
share
Bidar | ಬರಪೀಡಿತ ಪಟ್ಟಿಯಿಂದ ಕಮಲನಗರ ಕೈಬಿಟ್ಟಿರುವುದು ಖಂಡನೀಯ: ಪೂಜಾ ಬೆಲ್ಲೆ

ಬೀದರ್: ರಾಜ್ಯ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಬೀದರ್ ಜಿಲ್ಲೆಯ ಕಮಲನಗರ ತಾಲೂಕನ್ನು ಕೈಬಿಟ್ಟಿರುವುದು ರೈತಾಪಿ ವರ್ಗದಲ್ಲಿ ಆತಂಕ ಮೂಡಿಸಿದೆ ಎಂದು ಮದನೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂಜಾ ಬೆಲ್ಲೆ ಖಂಡಿಸಿದ್ದಾರೆ. ತಕ್ಷಣ ತಳಮಟ್ಟದಲ್ಲಿ ಮರುಸಮೀಕ್ಷೆ ನಡೆಸಿ ಕಮಲನಗರ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಮಲನಗರ ತಾಲೂಕಿನಲ್ಲಿ ಈ ಬಾರಿ ಮುಂಗಾರು ಮಳೆಯ ತೀವ್ರ ಕೊರತೆಯಿಂದ ಕೃಷಿ ಕ್ಷೇತ್ರ ಸಂಪೂರ್ಣವಾಗಿ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ನಿರೀಕ್ಷಿತ ಇಳುವರಿ ಬರುವ ಸಾಧ್ಯತೆ ಇಲ್ಲ. ಮುಂಗಾರಿನ ಪ್ರಮುಖ ಬೆಳೆಗಳಾದ ಹೆಸರು ಮತ್ತು ಉದ್ದು ಶೇ.100ರಷ್ಟು ನಾಶಗೊಂಡಿವೆ ಎಂದು ತಿಳಿಸಿದ್ದಾರೆ.

ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಗಳಾದ ಸೋಯಾಬಿನ್ ಮತ್ತು ತೊಗರಿ ಕೂಡ ಸಂಪೂರ್ಣವಾಗಿ ಒಣಗಿ ನೆಲಕಚ್ಚಿವೆ. ಬೆಳೆ ನಷ್ಟದ ಜೊತೆಗೆ ತಾಲೂಕಿನಾದ್ಯಂತ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಆತಂಕ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ತಾಲೂಕಿನ ರೈತರು ಸಂಕಷ್ಟದಲ್ಲಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ತಳಮಟ್ಟದಲ್ಲಿ ವಾಸ್ತವಿಕ ಸಮೀಕ್ಷೆ ನಡೆಸದೆ ಕಚೇರಿಯಲ್ಲಿ ಕುಳಿತು ಬೇಜವಾಬ್ದಾರಿ ವರದಿ ನೀಡಿದ್ದಾರೆ. ಅಧಿಕಾರಿಗಳ ಅಸಡ್ಡೆಯಿಂದ ಕಮಲನಗರಕ್ಕೆ ಬರ ಪರಿಹಾರ ದೊರೆಯದಂತಾಗಿದೆ ಎಂದು ಪೂಜಾ ಬೆಲ್ಲೆ ಆರೋಪಿಸಿದ್ದಾರೆ.

ಕಮಲನಗರ ತಾಲೂಕಿನಲ್ಲಿ ತಕ್ಷಣ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಂದ ತಳಮಟ್ಟದ ನೈಜ ಸಮೀಕ್ಷೆ ನಡೆಸಬೇಕು. ಬೆಳೆ ನಷ್ಟದ ಪ್ರಮಾಣವನ್ನು ಪರಿಗಣಿಸಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೂ ಸೂಕ್ತ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇಲ್ಲದಿದ್ದರೆ ತಾಲೂಕಿನ ರೈತರನ್ನು ಒಗ್ಗೂಡಿಸಿ ಹೋರಾಟ ನಡೆಸಲಾಗುವುದು ಎಂದು ಪೂಜಾ ಬೆಲ್ಲೆ ಎಚ್ಚರಿಕೆ ನೀಡಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X