Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಪಾರ್ಥೇನಿಯಂ ನಿಯಂತ್ರಣಕ್ಕೆ...

Bidar | ಪಾರ್ಥೇನಿಯಂ ನಿಯಂತ್ರಣಕ್ಕೆ ರೈತರು, ಸಾರ್ವಜನಿಕರು ಮುಂದಾಗಿ : ಡಾ.ಎಸ್.ವಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ19 Aug 2026 7:01 PM IST
share
Bidar | ಪಾರ್ಥೇನಿಯಂ ನಿಯಂತ್ರಣಕ್ಕೆ ರೈತರು, ಸಾರ್ವಜನಿಕರು ಮುಂದಾಗಿ : ಡಾ.ಎಸ್.ವಿ.ಪಾಟೀಲ್
‘21ನೇ ಪಾರ್ಥೇನಿಯಂ ಜಾಗೃತಿ ಸಪ್ತಾಹ’ ಕಾರ್ಯಕ್ರಮ

ಬೀದರ್: ಒಂದು ಪಾರ್ಥೇನಿಯಂ ಸಸ್ಯವು ಸುಮಾರು 5 ಸಾವಿರದಿಂದ 25 ಸಾವಿರ ಬೀಜಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಗಾಳಿ, ನೀರು ಹಾಗೂ ಮಾನವ ಚಟುವಟಿಕೆಗಳಿಂದ ವೇಗವಾಗಿ ಹರಡುತ್ತದೆ. ಇದರಿಂದ ಕೃಷಿ ಭೂಮಿಯ ಫಲವತ್ತತೆ ಹಾಗೂ ಬೆಳೆಗಳ ಬೆಳವಣಿಗೆಗೆ ಹಾನಿಯಾಗುವುದರ ಜತೆಗೆ, ಮಾನವರಲ್ಲಿ ಚರ್ಮದ ಅಲರ್ಜಿ ಮತ್ತು ಉಸಿರಾಟದ ಸಮಸ್ಯೆಗಳು ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ರೈತರು ಹಾಗೂ ಸಾರ್ವಜನಿಕರು ಸೂಕ್ತ ಸಮಯದಲ್ಲಿ ಪಾರ್ಥೇನಿಯಂ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಸ್.ವಿ. ಪಾಟೀಲ್ ಕರೆ ನೀಡಿದರು.

ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ತೋಟಗಾರಿಕಾ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ–1 ಮತ್ತು 2ರ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘21ನೇ ಪಾರ್ಥೇನಿಯಂ ಜಾಗೃತಿ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

1950ರಲ್ಲಿ ಅಮೆರಿಕದಿಂದ ಪಿಎಲ್–480 ಯೋಜನೆಯಡಿ ಗೋಧಿ ಆಮದು ಮಾಡಿಕೊಂಡ ಸಂದರ್ಭದಲ್ಲಿ ಪಾರ್ಥೇನಿಯಂ ಸಸ್ಯ ಭಾರತಕ್ಕೆ ಪ್ರವೇಶಿಸಿತು. 1955–56ರಲ್ಲಿ ಮೊದಲ ಬಾರಿಗೆ ಪುಣೆಯಲ್ಲಿ ಕಾಣಿಸಿಕೊಂಡ ಈ ಕಳೆ ಇದೀಗ ದೇಶದ ವಿವಿಧೆಡೆ ವ್ಯಾಪಕವಾಗಿ ಹರಡಿದೆ. ಇದರ ನಿಯಂತ್ರಣಕ್ಕೆ ನಿರಂತರ ಕ್ರಮ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

ತೋಟಗಾರಿಕಾ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ವಿಜಯ್ ಮಹಾಂತೇಶ್ ಅವರು ಪಾರ್ಥೇನಿಯಂ ನಿಯಂತ್ರಣದ ವಿವಿಧ ವಿಧಾನಗಳು ಹಾಗೂ ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು.

ಶ್ರಮದಾನ :

ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣದಲ್ಲಿ ನೈಸರ್ಗಿಕವಾಗಿ ಬೆಳೆದಿದ್ದ ಪಾರ್ಥೇನಿಯಂ ಕಳೆಯನ್ನು ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ತೆರವುಗೊಳಿಸಿದರು.

ಪ್ರಾಧ್ಯಾಪಕರಾದ ಡಾ. ಮುಹ್ಮದ್ ಫಾರೂಕ್, ಡಾ. ಅನುರಾಧಾ, ಡಾ. ಜಾನವಿ ಡಿ.ಆರ್., ಎನ್‌ಎಸ್‌ಎಸ್ ಅಧಿಕಾರಿ ಡಾ. ರಮೇಶ್ ನಾಯಕ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X