Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಟಾಟಾ ಪವರ್‌ಗೆ ವಿದ್ಯುತ್...

Bidar | ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡದಂತೆ ರೈತ ಸಂಘದಿಂದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Jun 2026 6:12 PM IST
share
Bidar | ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡದಂತೆ ರೈತ ಸಂಘದಿಂದ ಆಗ್ರಹ
ಕರ್ನಾಟಕ ರಾಜ್ಯ ರೈತ ಸಂಘದ ನೂತನ ಪದಾಧಿಕಾರಿಗಳ ನೇಮಕ

ಬೀದರ್‌: ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಜವಾಬ್ದಾರಿ ನೀಡಬಾರದು. ವಿದ್ಯುತ್ ಕ್ಷೇತ್ರದ ಖಾಸಗೀಕರಣವು ಜನವಿರೋಧಿ ನೀತಿಯಾಗಿದ್ದು, ಸರ್ಕಾರ ಈ ಪ್ರಸ್ತಾವನೆಯನ್ನು ತಿರಸ್ಕರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಆಗ್ರಹಿಸಿದರು.

ನಗರದ ಮಯೂರಾ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಬೈನ ಟಾಟಾ ಪವರ್ ಕಂಪನಿ ಕರ್ನಾಟಕದ ಸರ್ಕಾರಿ ವಿದ್ಯುತ್ ವಿತರಣಾ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಮಾನಾಂತರವಾಗಿ ವಿದ್ಯುತ್ ವಿತರಣಾ ಸೇವೆ ನೀಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ವಿದ್ಯುತ್ ಗ್ರಾಹಕರು ಹಾಗೂ ರೈತ ಸಮುದಾಯದ ಪರವಾಗಿ ರೈತ ಸಂಘ ಈ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

ವಿದ್ಯುತ್, ನೀರು ಹಾಗೂ ಇತರೆ ಸಾರ್ವಜನಿಕ ಸೇವಾ ಕ್ಷೇತ್ರಗಳು ಸರ್ಕಾರದ ನಿಯಂತ್ರಣದಲ್ಲಿಯೇ ಇರಬೇಕು. ಲಾಭದ ಉದ್ದೇಶದಿಂದ ಕಾರ್ಯನಿರ್ವಹಿಸುವ ಖಾಸಗಿ ಸಂಸ್ಥೆಗಳಿಗೆ ಇಂತಹ ಮೂಲಭೂತ ಸೇವೆಗಳನ್ನು ಒಪ್ಪಿಸುವುದು ಜನಹಿತಕ್ಕೆ ವಿರುದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಬೀದರ್ ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ತೆರಳಿ ರೈತರಿಂದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಗಳಿಗೆ ವೈಯಕ್ತಿಕ ಆಕ್ಷೇಪಣೆ ಸಲ್ಲಿಸುವ ಅಭಿಯಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಬಿರಾದಾರ್ ಸಂಗಮಕರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷಕುಮಾರ್ ಗುದಗೆ, ಜಿಲ್ಲಾ ಉಪಾಧ್ಯಕ್ಷರಾಗಿ ವಿಠಲರೆಡ್ಡಿ ಆಣದೂರ್, ಖಜಾಂಚಿಯಾಗಿ ಭವರಾವ್ ನೆಲವಾಡೆ ಹಾಗೂ ಕಾರ್ಯದರ್ಶಿಯಾಗಿ ವಿಠಲರಾವ್ ಮೇತ್ರೆ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರೈತ ಪ್ರಮುಖರಾದ ಶಾಂತಮ್ಮ ಮೂಲಗೆ, ಶಿವರಾಯ್ ಮುದಾಳೆ, ಕೊಂಡಿಬಾರಾವ್ ಪಾಂಡ್ರೆ, ಷಣ್ಮುಖಪ್ಪ ತೆಗಂಪುರ್, ಖಾಸಿಂ ಅಲಿ ಆಜಾದ್, ಸಚಿನ್ ಪಾಂಡ್ರೆ, ಬಸವ ಅಷ್ಟೂರೆ, ವಿಶ್ವನಾಥ್ ಧರಣೆ, ರಾಜಕುಮಾರ್ ಸ್ವಾಮಿ ಹಾಗೂ ಶಿವಕುಮಾರ್ ಕಾರಬಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.‌

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X