Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಟನ್ ಕಬ್ಬಿಗೆ 3,600 ರೂ....

Bidar | ಟನ್ ಕಬ್ಬಿಗೆ 3,600 ರೂ. ನಿಗದಿಪಡಿಸದಿದ್ದರೆ ಹೆದ್ದಾರಿ ತಡೆದು ಹೋರಾಟ: ರೈತ ಸಂಘ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 Nov 2026 5:47 PM IST
share
Bidar | ಟನ್ ಕಬ್ಬಿಗೆ 3,600 ರೂ. ನಿಗದಿಪಡಿಸದಿದ್ದರೆ ಹೆದ್ದಾರಿ ತಡೆದು ಹೋರಾಟ: ರೈತ ಸಂಘ ಎಚ್ಚರಿಕೆ

ಬೀದರ್: ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರಸಕ್ತ ಹಂಗಾಮಿನಲ್ಲಿ ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನಿಗದಿಪಡಿಸಬೇಕು. ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ದೀಪಾವಳಿ ಹಬ್ಬದ ನಂತರ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಹೋರಾಟ ನಡೆಸುವುದಾಗಿ ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ್ ಬಿರಾದಾರ್, ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಸ್ವಾಮಿ ಸಿರ್ಸಿ ಜಂಟಿ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ನ. 7ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಬ್ಬಿನ ಬೆಲೆ ನಿಗದಿ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು, ರೈತ ಸಂಘದ ಮುಖಂಡರು ಹಾಗೂ ಕಬ್ಬು ಬೆಳೆಗಾರರ ಸಭೆ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿಗಳು ರೈತರು ಎಷ್ಟು ದರ ನಿರೀಕ್ಷಿಸುತ್ತಿದ್ದಾರೆ ಎಂದು ವಿಚಾರಿಸಿದಾಗ, ಬೆಳಗಾವಿ ಜಿಲ್ಲೆಯ ಮಾದರಿಯಂತೆ ಪ್ರತಿ ಟನ್ ಕಬ್ಬಿಗೆ ಮೊದಲ ಕಂತಿನಲ್ಲಿ 3,600 ರೂ. ನೀಡಬೇಕು. ಅಲ್ಲದೆ, ಸಕ್ಕರೆ ಬೆಲೆ ಹೆಚ್ಚಳದಿಂದ ಕಾರ್ಖಾನೆಗಳಿಗೆ ದೊರೆಯುವ ಹೆಚ್ಚುವರಿ ಲಾಭದಲ್ಲಿ ಶೇ. 75ರಷ್ಟನ್ನು ರೈತರಿಗೆ ಹಾಗೂ ಶೇ. 25ರಷ್ಟನ್ನು ಕಾರ್ಖಾನೆಗಳಿಗೆ ನೀಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು ಎಂದು ಅವರು ತಿಳಿಸಿದ್ದಾರೆ.

ಆದರೆ, ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಪ್ರತಿ ಟನ್ ಕಬ್ಬಿಗೆ ಕೇವಲ 3,100 ರೂ. ನೀಡುವುದಾಗಿ ತಿಳಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ರೈತ ಮುಖಂಡರು, 3,600 ರೂ. ಕ್ಕಿಂತ ಕಡಿಮೆ ದರಕ್ಕೆ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆದರೂ ಒಮ್ಮತ ಮೂಡಲಿಲ್ಲ. ಕೊನೆಗೆ ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ, ಕಾರ್ಖಾನೆಗಳಿಂದ ಇನ್ನೂ 100 ರೂ. ಹೆಚ್ಚುವರಿಯಾಗಿ ಕೊಡಿಸುವುದಾಗಿ ಭರವಸೆ ನೀಡಿದರೂ ರೈತ ಮುಖಂಡರು ಇದಕ್ಕೆ ಒಪ್ಪದೆ ಸಭೆಯಿಂದ ಹೊರಬಂದರು ಎಂದು ಅವರು ಹೇಳಿದ್ದಾರೆ.

2025-26ನೇ ಸಾಲಿನಲ್ಲಿ ಬೀದರ್ ಜಿಲ್ಲೆಯ ರೈತರಿಗೆ ಪ್ರತಿ ಟನ್ ಕಬ್ಬಿಗೆ 2,900 ರೂ. ಮಾತ್ರ ದೊರೆತಿದ್ದರೆ, ಬೆಳಗಾವಿ ಜಿಲ್ಲೆಯ ರೈತರು 3,300 ರೂ. ಪಡೆದಿದ್ದರು. ಈ ವರ್ಷ ಬೆಳಗಾವಿ ಭಾಗದಲ್ಲಿ ಚುನ್ನಪ್ಪ ಪೂಜಾರಿ ಮತ್ತು ಶಶಿಕಾಂತ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ಚುಕ್ಕಿ ನಂಜುಂಡಸ್ವಾಮಿ, ಬಡಗಲ್ಪೂರ ನಾಗೇಂದ್ರ, ಕುರುಬೂರು ಶಾಂತಕುಮಾರ್, ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಹಲವು ರೈತ ಸಂಘಟನೆಗಳು ಬೆಂಬಲ ನೀಡಿದ್ದವು. ಈ ಹೋರಾಟದ ಫಲವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನಿಗದಿಯಾಗಿದೆ. ಬೆಳಗಾವಿ ರೈತರ ಹೋರಾಟಕ್ಕೆ ಬೀದರ್ ಜಿಲ್ಲೆಯ ರೈತರೂ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿದ್ದರು.

ಹೀಗಿರುವಾಗ, ಬೆಳಗಾವಿ ಮಾದರಿಯಲ್ಲಿಯೇ ಬೀದರ್ ಜಿಲ್ಲೆಯ ರೈತರಿಗೂ ನ್ಯಾಯಯುತ ಬೆಲೆ ದೊರೆಯಬೇಕು. ಕಳೆದ ವರ್ಷಕ್ಕಿಂತ ಈ ವರ್ಷ ಕನಿಷ್ಠ 700 ರೂ. ಹೆಚ್ಚುವರಿಯಾಗಿ ದೊರೆಯುವಂತೆ ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನಿಗದಿಪಡಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಕಾರ್ಖಾನೆಗಳ ಆಡಳಿತ ಮಂಡಳಿಗಳು ರೈತರ ಬೇಡಿಕೆಗೆ ಒಪ್ಪಿಗೆ ಸೂಚಿಸದಿದ್ದರೆ ದೀಪಾವಳಿ ಹಬ್ಬದ ನಂತರ ದಿನಾಂಕ ನಿಗದಿಪಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಜಿಲ್ಲೆಯ ಸಾವಿರಾರು ರೈತರು ಹಾಗೂ ಕಬ್ಬು ಬೆಳೆಗಾರರು ಒಗ್ಗಟ್ಟಿನಿಂದ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Tags

sugarcaneFarmersBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X