Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಪ್ರತಿ ಎಕರೆಗೆ 25 ಸಾವಿರ ರೂ....

ಬೀದರ್ | ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲು ಒತ್ತಾಯಿಸಿ ರೈತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Sept 2025 3:22 PM IST
share
ಬೀದರ್ | ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲು ಒತ್ತಾಯಿಸಿ ರೈತರಿಂದ ಪ್ರತಿಭಟನೆ

ಬೀದರ್ : ಅತಿವೃಷ್ಟಿಯಿಂದ ಬೆಳೆಗಳು ಹಾನಿಯಾಗಿದ್ದು, ಅತೀ ಶೀಘ್ರದಲ್ಲಿ ಎಲ್ಲಾ ರೈತರ ಖಾತೆಗಳಿಗೆ ಪ್ರತಿ ಏಕರೆ ಭೂಮಿಗೆ 25 ಸಾವಿರ ರೂ. ಬೆಳೆ ಹಾನಿ ಪರಿಹಾರ ಧನ ಜಮೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.

ಇಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ರೈತರು ಅತಿವೃಷ್ಟಿಯಿಂದ ಹಾಳಾಗಿದ್ದ ಬೆಳೆ ತಂದು ಪರಿಹಾರಕ್ಕಾಗಿ ಘೋಷಣೆ ಕೂಗಿದರು. ನಂತರ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿದರು.

ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಬೀದರ್ ಜಿಲ್ಲೆಯಲ್ಲಿ ಸುಮಾರು 2 ತಿಂಗಳಿಂದ ಸತತವಾಗಿ ಮಳೆಯಾಗುತ್ತಿದ್ದು, ಇದರಿಂದ ಹೆಸರು, ಉದ್ದು, ಸೋಯಾಬಿನ್, ತೊಗರಿ, ಹತ್ತಿ, ತೋಟಗಾರಿಕೆ ಬೆಳೆ, ನದಿ ಭಾಗದಲ್ಲಿನ ಕಬ್ಬು ಸೇರಿದಂತೆ ಮುಂತಾದ ಬೆಳೆಗಳು ನಷ್ಟವಾಗಿದೆ. ಅನೇಕ ಕಡೆಗಳಲ್ಲಿ ಕೆರೆಗಳು ತುಂಬಿ ಒಡೆದಿವೆ. ಜಾನುವಾರುಗಳು, ನೀರಿಗೆ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿವೆ. ಹಳ್ಳಿಗಳಲ್ಲಿ ಮನೆಗಳು ಕುಸಿದಿವೆ. ನಿರಂತರ ಮಳೆಯಿಂದ ಹೊಲದಲ್ಲಿ ಕೆಲಸ ಮಾಡಲು ಬಿಡದ ಪರಿಣಾಮವಾಗಿ ರಬ್ಬಿ ಹಂಗಾಮಿನ ಬೆಳೆಗಳ ಮೇಲೂ ಕೂಡ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಈಗಲಾದರೂ ಬೀದರ್ ಜಿಲ್ಲೆ ಹಸಿರು ಬರ ಜಿಲ್ಲೆ ಎಂದು ಘೋಷಣೆ ಮಾಡಿ, ಅತೀ ಶೀಘ್ರದಲ್ಲಿ ಪ್ರತಿ ಎಕರೆಗೆ ರೈತರ ಖಾತೆಗೆ 25 ಸಾವಿರ ರೂ. ಪರಿಹಾರ ಹಣನೀಡಬೇಕು ಎಂದು ಒತ್ತಾಯಿಸಲಾಗಿದೆ.

ಜಿಲ್ಲೆಯ ಕೃಷಿ ಅಧಿಕಾರಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳಿಂದ ಬೆಳೆ ಹಾನಿ ಸಮೀಕ್ಷೆ ಮುಗಿದಿದೆ. ಆದರೆ, ಇಲ್ಲಿಯವರೆಗೆ ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಜಮೆಯಾಗದಿರುವುದು ವಿಷಾದದ ಸಂಗತಿಯಾಗಿದೆ ಎಂದು ಆಕ್ರೋಶ ಹೊರ ಹಾಕಲಾಗಿದೆ.

ಹಾನಿ ಪರಿಹಾರ ಒದಗಿಸಿ, ರೈತರ ಹಿತ ಕಾಪಾಡಬೇಕು. ಬೆಳೆ ವಿಮೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆವಿಮೆ ಮಾಡಿದ ಎಲ್ಲಾ ರೈತರಿಗೆ ಕೂಡಲೇ ಬೆಳೆ ವಿಮೆ ಪರಿಹಾರ ಒದಗಿಸಬೇಕು. ಹಾಗೆಯೇ ನಿರಂತರ ಮಳೆಯಿಂದ ಖರೀಫ್ ಮತ್ತು ರಬ್ಬಿ ಹಂಗಾಮಿನ ಬೆಳೆಗಳ ಮೇಲೆ ಕೆಟ್ಟ ಪರಿಣಾಮ ಬಿದ್ದಿರುವುದರಿಂದ ರೈತ ಕಂಗಾಲಾಗಿದ್ದಾರೆ. ಬೆಳೆ ಸಾಲ ಕಟ್ಟಲು ಸಮರ್ಥನಿರುವುದಿಲ್ಲದರಿಂದ ಎಲ್ಲಾ ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ನಮ್ಮ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ದಿನಗಳಲ್ಲಿ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಲಾಗುವುದು. ಹೋರಾಟದಲ್ಲಿ ಯಾವುದೇ ಅಹಿತಕರ ಘಟನೆಯಾದರೆ ತಾವೇ ಜವಾಬ್ದಾರರಾಗುತ್ತೀರಿ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಜಮಖಂಡಿ, ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ್ ಬಿರಾದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಸ್ವಾಮಿ ಸಿರ್ಸಿ, ಔರಾದ್ ತಾಲೂಕು ಅಧ್ಯಕ್ಷ ಪ್ರಕಾಶ್ ಬಾವಗೆ, ಮಹಿಳಾ ಜಿಲ್ಲಾಧ್ಯಕ್ಷೆ ಶೋಭಾವತಿ ಕಾರಬಾರಿ, ಮಹಿಳಾ ಕಾರ್ಯಧ್ಯಕ್ಷೆ ಸುನೀತಾ ನೀಲಕಂಠರಾವ್ ಹಾಗೂ ಬಸವರಾಜ್ ಸೋನಾಳ್ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X