ಬೀದರ್| 16ನೇ ದಿನ ಪೂರೈಸಿದ ಎಸ್‌ಐಆರ್, ಇವಿಎಂ ವಿರುದ್ಧದ ಉಪವಾಸ ಸತ್ಯಾಗ್ರಹ

ಔರಾದ್: ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ಎಸ್‌ಐಆರ್ ಹಾಗೂ ಇವಿಎಂ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರು ನಡೆಸುತ್ತಿರುವ ಏಕಾಂಗಿ ಉಪವಾಸ ಸತ್ಯಾಗ್ರಹ ಸೋಮವಾರಕ್ಕೆ 16ನೇ ದಿನ ಪೂರೈಸಿದೆ.
ಗೋಪಾಲ್ ಸಿಂಗ್ ಠಾಕೂರ್ ಅವರು ಮೇ.3ರಿಂದ ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆಹಾರ ಪದಾರ್ಥ, ಜ್ಯೂಸ್ ಸಹ ಸೇವಿಸದೆ ಕೇವಲ ನೀರು ಸೇವಿಸಿ ಸತ್ಯಾಗ್ರಹ ಮುಂದುವರೆಸಿದ್ದಾರೆ.
ಪ್ರಜಾಪ್ರಭುತ್ವದ ಮೂಲ ಆಧಾರವಾದ ಮತದಾನದ ಹಕ್ಕಿಗೆ ಧಕ್ಕೆಯುಂಟು ಮಾಡುವ ಎಸ್‌ಐಆರ್ ಹಾಗೂ ಇವಿಎಂ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ಪ್ರಜಾತಂತ್ರದ ಮೌಲ್ಯಗಳನ್ನು ಉಳಿಸಬೇಕು ಎಂಬ ಉದ್ದೇಶದಿಂದ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
Next Story




