ಬೀದರ್ | ಸಿಗರೇಟ್ ಸೇದುವ ವಿಚಾರದಲ್ಲಿ ತಗಾದೆ: ಯುವಕನ ಕೊಲೆ

ಬೀದರ್ : ಸಿಗರೇಟ್ ಸೇದುವ ವಿಚಾರವಾಗಿ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಚಿಟಗುಪ್ಪ ತಾಲೂಕಿನ ಮನ್ನಾಏಖ್ಖೇಳ್ಳಿ ಗ್ರಾಮದ ಕಾಳಿದಾಸ ಕಾಲನಿ ಹತ್ತಿರ ಬುಧವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮನ್ನಾಏಖ್ಖೇಳ್ಳಿ ಗ್ರಾಮದ ನಿವಾಸಿ ಗಣಪತಿ(35) ಕೊಲೆಯಾದವರು.
ಗಣಪತಿ ಡ್ರೈವರ್ ಕೆಲಸ ಮಾಡಿಕೊಂಡಿದ್ದರು. ಸಿಗರೇಟ್ ಸೇದುವ ಕ್ಷುಲ್ಲಕ ಕಾರಣಕ್ಕೆ ಕುಡುಗೋಲಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮನ್ನಾಏಖ್ಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





