Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ | ನಕಲಿ ವೈದ್ಯರ ವಿರುದ್ಧ...

ಬೀದರ್‌ | ನಕಲಿ ವೈದ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ : ಡಿಸಿ ಶಿಲ್ಪಾ ಶರ್ಮಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Oct 2026 6:41 PM IST
share
ಬೀದರ್‌ | ನಕಲಿ ವೈದ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ : ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್‌ : ಕಮಲನಗರದಲ್ಲಿ ನಕಲಿ ವೈದ್ಯ ವೃತ್ತಿ ನಡೆಸುತ್ತಿದ್ದ ಕಲ್ಕತ್ತಾ ಮೂಲದ ಗೌತಮ್‌ ಸಮದರ್‌ ಹಾಗೂ ಸುಜಲಕುಮಾರ್‌ ಸೇನ್‌ ಎಂಬುವರಿಗೆ ಈ ಹಿಂದೆ ತಲಾ 25 ಸಾವಿರ ರೂ. ದಂಡ ವಿಧಿಸಿ ಮತ್ತೆ ವೈದ್ಯ ವೃತ್ತಿ ನಡೆಸದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ, ಇವರು ಮತ್ತೆ ವೈದ್ಯ ವೃತ್ತಿ ಮುಂದುವರಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಇಬ್ಬರಿಗೂ ತಲಾ 2 ಲಕ್ಷ 50 ಸಾವಿರ ರೂ.ಗಳ ಭಾರಿ ದಂಡ ವಿಧಿಸುವುದರ ಜೊತೆಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಭಾಂಗಣದಲ್ಲಿ ನಡೆದ ಕೆಪಿಎಂಇ ಜಿಲ್ಲಾ ಮಟ್ಟದ ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದ ಪ್ರೇಮಕುಮಾರ್‌ ಅವರು ಸರ್ಕಾರಿ ಶುಶ್ರೂಷಾಧಿಕಾರಿಯಾಗಿ ಮುಧೋಳ್‌(ಬಿ) ಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದುದು ದಾಳಿ ವೇಳೆ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಇವರನ್ನು ಜ.31ರಂದು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿದ್ದರು. ಎರಡನೇ ಬಾರಿ ದಾಳಿ ನಡೆಸಿದಾಗ ಅಮಾನತಿನಲ್ಲಿದ್ದರೂ ಸಹ ಪ್ರೇಮಕುಮಾರ್‌ ಅವರು ಖಾಸಗಿ ವೈದ್ಯ ವೃತ್ತಿ ಮುಂದುವರಿಸಿದ ಕಾರಣ ಅ.5ರಂದು ಎರಡನೇ ಬಾರಿ ದಾಳಿ ನಡೆಸಿ ಕ್ಲಿನಿಕ್ ಅನ್ನು ಸೀಜ್‌ ಮಾಡಲಾಗಿದೆ ಎಂದು ತಿಳಿಸಿದರು.

ಡಾ. ಹರೀಶ್ ವಿಶ್ವಕರ್ಮ ಅವರು ಆಯುರ್ವೇದ ವೈದ್ಯಕೀಯ ಪದವಿ ಪಡೆದು, ಕಮಠಾಣ ಗ್ರಾಮದ ಪ್ರಗತಿ ಕ್ಲಿನಿಕ್‌ನಲ್ಲಿ ಅಲೋಪತಿ ವೈದ್ಯ ವೃತ್ತಿ ನಡೆಸುತ್ತಿರುವುದು ಕೆಪಿಎಂಇ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ 50 ಸಾವಿರ ರೂ. ದಂಡ ವಿಧಿಸಿ, ಅಲೋಪತಿ ಪ್ರಾಕ್ಟೀಸ್ ಮಾಡದಂತೆ ಎಚ್ಚರಿಕೆ ನೀಡಲಾಯಿತು.

ಯಾವುದೇ ಅಧಿಕೃತ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ ನಡೆಸುತ್ತಿದ್ದ ನಕಲಿ ವೈದ್ಯರಾದ ರಾಜಶೇಖರ್‌ (ಜಂಬಗಿಯ ಬಾಲಜಿ ಕ್ಲಿನಿಕ್) ಸುಭಾಷ್‌ದಾಸ್‌ (ಆಣದೂರ್‌) ಹಾಗೂ ವಿಶ್ವಜೀತ್ ಬೀರಿ (ಕೆ) ಇವರಿಗೆ ತಲಾ 50 ಸಾವಿರ ರೂ. ದಂಡ ವಿಧಿಸಿ ಪುನಃ ವೈದ್ಯ ವೃತ್ತಿ ನಡೆಸದಂತೆ ಎಚ್ಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿತ್ತೆ ಮಾಧವ್‌ ವಿಠ್ಠಲರಾವ್, ಸಹಾಯಕ ಆಯುಕ್ತ ಅಭಿನವ್ ಜೈನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅನೀಲಕುಮಾರ್‌ ಚಿಂತಾಮಣಿ, ಕೆಪಿಎಂಇ ಜಿಲ್ಲಾ ನೋಡಲ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

Tags

BidarDCShilpa Sharma
share
ವಾರ್ತಾಭಾರತಿ
ವಾರ್ತಾಭಾರತಿ
Next Story
X