Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್| ಕರ್ನಾಟಕ ಆರ್ ಟಿಐ ಕಾರ್ಯಕರ್ತರ...

ಬೀದರ್| ಕರ್ನಾಟಕ ಆರ್ ಟಿಐ ಕಾರ್ಯಕರ್ತರ ಸಂಘದ ಪ್ರಥಮ ಜಿಲ್ಲಾ ಸಮ್ಮೇಳನ; ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ18 May 2026 4:28 PM IST
share
ಬೀದರ್| ಕರ್ನಾಟಕ ಆರ್ ಟಿಐ ಕಾರ್ಯಕರ್ತರ ಸಂಘದ ಪ್ರಥಮ ಜಿಲ್ಲಾ ಸಮ್ಮೇಳನ; ಪದಾಧಿಕಾರಿಗಳ ಆಯ್ಕೆ

ಬೀದರ್ : 2005ರಲ್ಲಿ ಜಾರಿಯಾದ ಮಾಹಿತಿ ಹಕ್ಕು ಕಾಯ್ದೆಯಿಂದ ಸಾಮಾನ್ಯ ನಾಗರಿಕರಿಗೆ ಅಧಿಕಾರಿಗಳನ್ನು ಪ್ರಶ್ನಿಸುವ ಹಕ್ಕು ದೊರೆತಿದೆ. ಆದರೆ, ಮಾಹಿತಿ ಹಕ್ಕಿನಡಿ ಕೇಳಿದ ಮಾಹಿತಿಯನ್ನು ಸಕಾಲದಲ್ಲಿ ಮಾಹಿತಿ ನೀಡದೆ ಜನರಿಗೆ ತೊಂದರೆ ಉಂಟು ಮಾಡಲಾಗುತ್ತಿದೆ ಎಂದು ಕರ್ನಾಟಕ ಆರ್ ಟಿಐ ಕಾರ್ಯಕರ್ತರ ಸಂಘದ ರಾಜ್ಯಾಧ್ಯಕ್ಷ ಬಾಬುರಾವ್ ಹೊನ್ನಾ ಆರೋಪಿಸಿದರು.

ನಗರದ ಸ್ಟಾರ್ ಲಾಡ್ಜ್ ಆವರಣದಲ್ಲಿ ರವಿವಾರ ಕರ್ನಾಟಕ ಆರ್ ಟಿಐ ಕಾರ್ಯಕರ್ತರ ಸಂಘದ ಜಿಲ್ಲಾ ಸಮಿತಿಯ ಪ್ರಥಮ ಜಿಲ್ಲಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಾಹಿತಿ ಕೇಳುವ ನಾಗರಿಕರಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಸಂಫದ ರಾಜ್ಯ ಪ್ರಧಾನ ಕಾರ್ಯದರ್ಶಿ ಘಾಳೆಪ್ಪ ಸೋರಳ್ಳಿ ಮಾತನಾಡಿ, ಬ್ರೀಮ್ಸ್ ಆಸ್ಪತ್ರೆ ಹಾಗೂ ರೈಲ್ವೆ ಇಲಾಖೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಪನಸಾಲೆ ಜನವಾಡ ಅವರು ಮಾತನಾಡಿ, ಆರ್ ಟಿ ಐ ಕಾರ್ಯಕರ್ತರು ಸಂಘಟಿತರಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಬೇಕು ಎಂದು ಕರೆ ನೀಡಿ, ಅರಣ್ಯ ಇಲಾಖೆ ಹಾಗೂ ಅಂಚೆ ಇಲಾಖೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಮ್ಮೇಳನದಲ್ಲಿ ಕರ್ನಾಟಕ ಆರ್ ಟಿ ಐ ಕಾರ್ಯಕರ್ತರ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾಗಿ ಜೈಶೀಲಕುಮಾರ್, ಉಪಾಧ್ಯಕ್ಷರಾಗಿ ಪಪ್ಪುರಾಜ್ ಮೇತ್ರೆ, ಸಲ್ಮಾನ್ ಇಜಾಜ್ ಖಾನ್ ಹಾಗೂ ಶಾಹ್ ಮುಬಾಶೀರ್ ಇಸ್ಲಾಂ, ಪ್ರಧಾನ ಕಾರ್ಯದರ್ಶಿಯಾಗಿ ಅನ್ವರ್ ಶಾಹ್, ಜಂಟಿ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾಲೀದ್ ಹಾಗೂ ಶೇಖ್ ಅಮ್ಜದ್ ಪಾಶಾ, ಖಜಾಂಚಿಯಾಗಿ ಶಫಾಯತ್ ಅಲಿ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕಾರಿಣಿ ಸದಸ್ಯರಾಗಿ ಅಬ್ದುಲ್ ಶಮಿ ಅಲ್ಲಿಮೋದ್ದೀನ್, ಗುಂಡಪ್ಪ ಜ್ಯೋತಿ, ಅರುಣಕುಮಾರ್, ರವಿ ಬನಸುಡೆ ಚಿದ್ರಿ, ಸೂರ್ಯಕಾಂತ್, ಚಂದ್ರಕಾಂತ್, ಚಾಂದೋಬಾ ಹಾಗೂ ಸೋನಿ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಪನಸಾಲೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಘಾಳೆಪ್ಪ ಸೋರಳ್ಳಿ, ರಾಜ್ಯ ಸಮಿತಿ ಸದಸ್ಯ ಪ್ರಭು ಹೊಚ್ಚಕನಳ್ಳಿ ಸೇರಿದಂತೆ ಇತರರು ಇದ್ದರು. ನಜೀರ್ ಅಹ್ಮದ್ ಚೊಂಡಿ ನಿರೂಪಿಸಿ ವಂದಿಸಿದರು.

Tags

Bidar‌RTIactivists
share
ವಾರ್ತಾಭಾರತಿ
ವಾರ್ತಾಭಾರತಿ
Next Story
X