Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕಬ್ಬಿಗೆ ಪ್ರತಿ ಟನ್‌ಗೆ 4...

Bidar | ಕಬ್ಬಿಗೆ ಪ್ರತಿ ಟನ್‌ಗೆ 4 ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಿ: ಬಂಡೆಪ್ಪ ಖಾಶೆಂಪುರ್

ವಾರ್ತಾಭಾರತಿವಾರ್ತಾಭಾರತಿ9 Nov 2026 7:05 PM IST
share
Bidar | ಕಬ್ಬಿಗೆ ಪ್ರತಿ ಟನ್‌ಗೆ 4 ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಿ: ಬಂಡೆಪ್ಪ ಖಾಶೆಂಪುರ್

ಬೀದರ್: ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕೆಂದು ರೈತರು ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಬೆಂಬಲವಿದ್ದು, ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 4 ಸಾವಿರ ರೂ. ದರ ನಿಗದಿಪಡಿಸಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕ ಮಾಡುವ ಯಂತ್ರಗಳ ಕುರಿತು ಸಾಕಷ್ಟು ಆರೋಪಗಳಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಖುದ್ದಾಗಿ ತನಿಖೆ ನಡೆಸಿ, ರೈತರಲ್ಲಿ ತೂಕದ ಕುರಿತು ಇರುವ ಅನುಮಾನಗಳನ್ನು ನಿವಾರಿಸಬೇಕು ಎಂದರು.

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಹೀಗಾಗಿಯೇ ಬಸ್ ಟಿಕೆಟ್ ದರ, ಹಾಲು, ಮೊಸರು, ಬೆಣ್ಣೆ ಹಾಗೂ ತುಪ್ಪದ ಬೆಲೆ ಹೆಚ್ಚಿಸುವ ಮೂಲಕ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಿದೆ ಎಂದು ಆರೋಪಿಸಿದರು.

ಹಾಲಿನ ದರ ಹೆಚ್ಚಳದಿಂದ ರೈತರಿಗೆ ಅನುಕೂಲವಾಗಿದೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದ್ದು, ಈ ಬಗ್ಗೆ ವ್ಯಾಪಕ ಪ್ರಚಾರವನ್ನೂ ಪಡೆಯುತ್ತಿದೆ. ಪ್ರತಿ ಲೀಟರ್ ಹಾಲಿಗೆ 8 ರೂ. ಹೆಚ್ಚಿಸಲಾಗಿದೆ. ಇದರಲ್ಲಿ ರೈತರಿಗೆ 7 ರೂ. ಹಾಗೂ ಹಾಲು ಒಕ್ಕೂಟಕ್ಕೆ 1 ರೂ. ಸಿಗುತ್ತಿದೆ. ಆದರೆ, ಹೆಚ್ಚುವರಿ ಹಣವನ್ನು ನೇರವಾಗಿ ಜನರಿಂದಲೇ ಪಡೆಯಲಾಗುತ್ತಿದೆ. ಇದರಲ್ಲಿ ಸರ್ಕಾರದ ಪಾತ್ರವೇನು? ಸರ್ಕಾರ ಬಿಡಿಗಾಸನ್ನೂ ನೀಡಿಲ್ಲ ಎಂದು ಕಿಡಿಕಾರಿದರು.

ಎಲ್ಲ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಜನರ ಮೇಲೆ ಹೊರೆ ಹಾಕಲಾಗುತ್ತಿದೆ. ಒಂದೂವರೆ ವರ್ಷದ ನಂತರ ಕಾಂಗ್ರೆಸ್‌ನವರು ಅಧಿಕಾರದಿಂದ ಪರಾರಿಯಾಗಬೇಕೆಂದು ಹೇಳುತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿಯೇ ಇಷ್ಟೊಂದು ಪ್ರಮಾಣದಲ್ಲಿ ಬಸ್ ಟಿಕೆಟ್ ದರ ಹೆಚ್ಚಳವಾಗಿರಲಿಲ್ಲ ಎಂದು ದೂರಿದರು.

ಬೀದರ್‌-ಬೆಂಗಳೂರು ನಡುವೆ ಒಟ್ಟು 750 ಕಿ.ಮೀ. ಅಂತರವಿದೆ. ಈ ಹಿಂದೆ ಕೆಂಪು ಬಸ್‌ನಲ್ಲಿ ಪ್ರಯಾಣಿಸಲು ಪ್ರತಿ ಟಿಕೆಟ್‌ಗೆ 949 ರೂ. ದರವಿತ್ತು. ಈಗ ಅದನ್ನು 1,145 ರೂ. ಗೆ ಏರಿಸಲಾಗಿದೆ. ಅಂದರೆ, 196 ರೂ. ಹೆಚ್ಚಳವಾಗಿದೆ. ಬೀದರ್‌ನಿಂದ ಬೆಂಗಳೂರಿಗೆ ಒಂದು ಟ್ರಿಪ್ ಸಂಚರಿಸಲು ಪ್ರತಿ ಬಸ್‌ಗೆ ಸರಾಸರಿ 167 ಲೀಟರ್ ಡೀಸೆಲ್ ಅಗತ್ಯವಿದೆ. 2023ರಲ್ಲಿ ಪ್ರತಿ ಲೀಟರ್ ಡೀಸೆಲ್ ದರ 89 ರೂ. ಇತ್ತು. ಈಗ ಅದು 99.70 ರೂ. ಗೆ ಏರಿಕೆಯಾಗಿದ್ದು, ಸುಮಾರು 11 ರೂ. ಹೆಚ್ಚಳವಾಗಿದೆ. ಒಂದು ಟ್ರಿಪ್‌ನ ಒಟ್ಟು ವೆಚ್ಚದಲ್ಲಿ 2 ಸಾವಿರ ರೂ. ಹೆಚ್ಚಳ ಮಾಡಬಹುದಿತ್ತು. ಆದರೆ, ಈಗ 6 ಸಾವಿರ ರೂ. ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿದರು.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ವೆಚ್ಚವನ್ನು ಭರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಸಾರಿಗೆ ಸಚಿವರಿಗೆ ಲೆಕ್ಕಾಚಾರವೇ ಗೊತ್ತಿಲ್ಲ. ಹಾಲು, ಮದ್ಯ ಹಾಗೂ ಸ್ಟ್ಯಾಂಪ್ ತೆರಿಗೆ ಸೇರಿದಂತೆ ಎಲ್ಲದರ ದರವನ್ನೂ ಸರ್ಕಾರ ಹೆಚ್ಚಿಸಿದೆ. ಯುವನಿಧಿ ಯೋಜನೆ ಸ್ಥಗಿತಗೊಂಡಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಅಗತ್ಯವಿದೆ. ಆದರೆ, ಸರ್ಕಾರ 1 ಲಕ್ಷ ಕೋಟಿ ರೂ. ಸಾಲ ಮಾಡುತ್ತಿದೆ. ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಪಾವತಿಸಿಲ್ಲ. ರೈತರಿಗೂ ನೆಮ್ಮದಿಯಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಎಲ್ಲ ವಿಚಾರಗಳಲ್ಲೂ ದಿವಾಳಿಯಾಗಿದೆ. ರೈತರಿಗೆ ಬರ ಪರಿಹಾರವನ್ನು ತಕ್ಷಣ ವಿತರಿಸುವ ಬದಲು ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಏನು ಕೇಳಿದರೂ ಕೇಂದ್ರ ಸರ್ಕಾರ ಸಹಕರಿಸುತ್ತಿಲ್ಲ ಎಂದು ಹೇಳುತ್ತಿದೆ. ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದತ್ತ ನೋಡದೆ ಸಾಲ ಮನ್ನಾ ಮಾಡಿದ್ದರು. ಹೀಗಾಗಿಯೇ ಮುಂದಿನ ಐದು ವರ್ಷಗಳ ಕಾಲ ಪೂರ್ಣಾವಧಿ ಅಧಿಕಾರ ನೀಡುವಂತೆ ಎಚ್.ಡಿ. ಕುಮಾರಸ್ವಾಮಿ ಕೇಳುತ್ತಿದ್ದಾರೆ ಎಂದರು.

ಈಗಾಗಲೇ ಸ್ಥಗಿತಗೊಂಡಿರುವ ಬೀದರ್‌-ಬೆಂಗಳೂರು ವಿಮಾನ ಸೇವೆಯನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿದ ಅವರು, 2006ರಲ್ಲಿ ತಾವು ಸಚಿವರಾಗಿದ್ದಾಗ ಕೇಂದ್ರ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೀದರ್‌-ಬೆಂಗಳೂರು ವಿಮಾನಯಾನ ಸೇವೆ ಆರಂಭಿಸಿದ್ದಾಗಿ ತಿಳಿಸಿದರು. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮುಖಂಡರ ನಿಯೋಗವನ್ನು ಕರೆದೊಯ್ದು ಪುನಃ ವಿಮಾನಯಾನ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾವು ಬಯಸಿರುವುದಾಗಿ ತಿಳಿಸಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿಯಿದೆ. ಎರಡೂ ಪಕ್ಷಗಳ ವರಿಷ್ಠರು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ಬದ್ಧನಾಗಿರುತ್ತೇನೆ ಎಂದರು.

ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮೈತ್ರಿ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಬೇಕೋ ಅಥವಾ ಪ್ರತ್ಯೇಕವಾಗಿ ಕಣಕ್ಕಿಳಿಯಬೇಕೋ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ್, ಪ್ರಧಾನ ಕಾರ್ಯದರ್ಶಿ ಅಶೋಕ್ ಕೋಡಗೆ, ಮುಖಂಡರಾದ ಶಾಂತಲಿಂಗ್ ಸಾವಳಗಿ, ರಾಜಶೇಖರ್ ಜವಳೆ, ರಾಜು ಕಡ್ಯಾಳ್, ಬೊಮ್ಮಗೊಂಡ ಚಿಟ್ಟಾವಾಡಿ, ಅಭಿ ಕಾಳೆ ಹಾಗೂ ಜಾಫೆಟ್ ಕಡ್ಯಾಳ್ ಉಪಸ್ಥಿತರಿದ್ದರು.

Tags

sugarcaneBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X