ಬೀದರ್ | ವಿಧಾನ ಪರಿಷತ್ ಮಾಜಿ ಸದಸ್ಯ ಖಾಜಿ ಅರ್ಷದ್ ಅಲಿ ನಿಧನ

ಬೀದರ್ : ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿಂದಿಯ ಬೀದರ್ ಕೀ ಆವಾಜ್ ಮತ್ತು ಉರ್ದುವಿನ ಸುರ್ಖ್ ಝಮೀನ್ ಪತ್ರಿಕೆಯ ಸಂಪಾದಕರಾದ ಖಾಜಿ ಅರ್ಷದ್ ಅಲಿ (75) ಅವರು ಇಂದು ನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರರನ್ನು ಅಗಲಿದ್ದಾರೆ.
ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು.
ಖಾಜಿ ಅರ್ಷದ್ ಅಲಿ ಅವರ ನಿಧನಕ್ಕೆ ಜಿಲ್ಲೆಯ ರಾಜಕೀಯ ಗಣ್ಯರು, ಪತ್ರಕರ್ತರು ಸೇರಿದಂತೆ ಅನೇಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story





