Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಹುಲಸೂರ್ ಪ್ರಜಾಸೌಧ ಕಾಮಗಾರಿಗೆ...

Bidar | ಹುಲಸೂರ್ ಪ್ರಜಾಸೌಧ ಕಾಮಗಾರಿಗೆ ಎರಡು ಬಾರಿ ಶಂಕುಸ್ಥಾಪನೆ : ಸಾರ್ವಜನಿಕರಲ್ಲಿ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ23 Jun 2026 6:14 PM IST
share
Bidar | ಹುಲಸೂರ್ ಪ್ರಜಾಸೌಧ ಕಾಮಗಾರಿಗೆ ಎರಡು ಬಾರಿ ಶಂಕುಸ್ಥಾಪನೆ : ಸಾರ್ವಜನಿಕರಲ್ಲಿ ಅಸಮಾಧಾನ
ಸಚಿವರಿಂದ ಶಂಕುಸ್ಥಾಪನೆಯ ಬಳಿಕ ಶಾಸಕರಿಂದ ಬೇರೆ ಸ್ಥಳದಲ್ಲಿ ಶಂಕುಸ್ಥಾಪನೆ !

ಹುಲಸೂರ್: ತಾಲ್ಲೂಕು ಕೇಂದ್ರವಾಗಿ ಘೋಷಣೆಯಾಗಿ ಎಂಟು ವರ್ಷಗಳಾದರೂ ಸಮಗ್ರ ಆಡಳಿತಾತ್ಮಕ ಸೌಲಭ್ಯಗಳಿಗಾಗಿ ಕಾಯುತ್ತಿರುವ ಹುಲಸೂರ್ ಪಟ್ಟಣದಲ್ಲಿ ಪ್ರಜಾಸೌಧ ನಿರ್ಮಾಣ ಯೋಜನೆ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಸರ್ಕಾರದ ಅನುಮೋದನೆ, ಭೂದಾನ, ಅನುದಾನ ಮಂಜೂರು, ಟೆಂಡರ್ ಪ್ರಕ್ರಿಯೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿ ಪೂಜೆ ನೆರವೇರಿದ ಬಳಿಕ ಇದೀಗ ಮತ್ತೊಂದು ಜಾಗದಲ್ಲಿ ಶಂಕುಸ್ಥಾಪನೆ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಪ್ರಜಾಸೌಧ ನಿರ್ಮಾಣಕ್ಕಾಗಿ ಪಟ್ಟಣದ ಭೋಪಳೆ ಕುಟುಂಬವು ಸರ್ವೇ ಸಂಖ್ಯೆ 359/378ರಲ್ಲಿ 9.09 ಎಕರೆ ಜಮೀನನ್ನು ಕಂದಾಯ ಇಲಾಖೆಗೆ ಭೂದಾನ ಮಾಡಿತ್ತು. ಸರ್ಕಾರವು 2021ರ ಜುಲೈನಲ್ಲಿ ಈ ಜಾಗವನ್ನು ತಾಲೂಕು ಆಡಳಿತಾತ್ಮಕ ಸಂಕೀರ್ಣ ನಿರ್ಮಾಣಕ್ಕೆ ಅಧಿಕೃತವಾಗಿ ಗುರುತಿಸಿತ್ತು.

ಬಳಿಕ ಪ್ರಜಾಸೌಧ ನಿರ್ಮಾಣಕ್ಕಾಗಿ 8.60 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಂದಾಯ ಇಲಾಖೆ ಹಾಗೂ ಕೆಕೆಆರ್‌ಡಿಬಿಯಿಂದ ತಲಾ 4.30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಯೋಜನೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, 2025ರ ಡಿಸೆಂಬರ್ 2ರಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಬೀದರ್–ಲಾತೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಗುರುತಿಸಲಾದ ಜಾಗದಲ್ಲಿ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.

ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳ ಅವಧಿ ನಿಗದಿಪಡಿಸಲಾಗಿದ್ದರೂ, ನಿರ್ಮಾಣ ಸ್ಥಳದ ಕುರಿತ ಗೊಂದಲದಿಂದ ಕಾಮಗಾರಿ ಆರಂಭವಾಗಿಲ್ಲ. ನಿಗದಿತ ಅವಧಿಯ ಏಳು ತಿಂಗಳು ಕಳೆದಿರುವ ನಡುವೆಯೇ, ಸಚಿವರು ಭೂಮಿ ಪೂಜೆ ನೆರವೇರಿಸಿದ್ದ ಸ್ಥಳವನ್ನು ಬಿಟ್ಟು ಬೇರೆ ಜಾಗದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಒಂದೇ ಕಟ್ಟಡಕ್ಕೆ ಎರಡು ಸ್ಥಳಗಳಲ್ಲಿ ಶಂಕುಸ್ಥಾಪನೆ ನಡೆದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹುಲಸೂರ್–ಬಸವಕಲ್ಯಾಣ ರಾಜ್ಯ ಹೆದ್ದಾರಿ ಸಮೀಪದ ಹೊಸ ಜಾಗವನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ? ಈಗಾಗಲೇ ಭೂಮಿ ಪೂಜೆ ನಡೆದ ಜಾಗದ ಭವಿಷ್ಯ ಏನು? ಹಿಂದಿನ ನಿರ್ಧಾರದಲ್ಲಿ ಬದಲಾವಣೆ ಆಗಿದೆಯೇ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗುವ ಸಾರ್ವಜನಿಕ ಮಹತ್ವದ ಯೋಜನೆಯಾಗಿದ್ದರೂ, ಕಾರ್ಯಕ್ರಮದ ಕುರಿತು ವ್ಯಾಪಕ ಮಾಹಿತಿ ನೀಡದಿರುವುದು ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಕೆಲವು ಇಲಾಖಾ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಪೂರ್ವ ಮಾಹಿತಿ ಇರಲಿಲ್ಲ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಜಮೀನು ನೀಡಿದ ಬಳಿಕ ಅದನ್ನು ಬಳಸದಿರುವ ಬೆಳವಣಿಗೆಯಿಂದ ಭೂದಾನಿಗಳಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರದ ಮೇಲಿನ ನಂಬಿಕೆಯಿಂದ ಜಮೀನು ನೀಡಿದ್ದರೂ, ಈಗ ಅದನ್ನು ಕಡೆಗಣಿಸಿ ಬೇರೆ ಜಾಗದಲ್ಲಿ ಕಾಮಗಾರಿ ಕೈಗೊಳ್ಳಲು ಮುಂದಾಗಿರುವುದನ್ನು ಪ್ರಶ್ನಿಸಿ ಭೂದಾನಿ ದೇವೇಂದ್ರ ಭೋಪಳೆ ಹಾಗೂ ಕುಟುಂಬದವರು ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರವೇ ಜಾಗವನ್ನು ಸ್ವೀಕರಿಸಿ ಅಧಿಕೃತ ದಾಖಲೆಗಳಲ್ಲಿ ನಮೂದಿಸಿದ ನಂತರ ಬೇರೆ ಜಾಗದಲ್ಲಿ ಕಾಮಗಾರಿ ಕೈಗೊಳ್ಳಲು ಮುಂದಾಗಿರುವುದು ಭೂದಾನದ ಉದ್ದೇಶವನ್ನೇ ಪ್ರಶ್ನಿಸುವಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ಪ್ರಮುಖ ಕಾಮಗಾರಿಗಳ ಕಾರ್ಯಕ್ರಮಗಳಿಗೆ ಸಂಬಂಧಿತ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮಾಧ್ಯಮಗಳಿಗೆ ಪೂರ್ವ ಮಾಹಿತಿ ನೀಡುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದರೆ ಈ ಕಾರ್ಯಕ್ರಮದ ಕುರಿತು ಕೆಲವು ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ.

ಸಾರ್ವಜನಿಕ ಹಣದಿಂದ ನಿರ್ಮಾಣವಾಗುತ್ತಿರುವ ಯೋಜನೆಯ ಕಾರ್ಯಕ್ರಮ ಪಾರದರ್ಶಕವಾಗಿ ನಡೆಯಬೇಕಿತ್ತು ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.

ಹುಲಸೂರ್ ತಾಲ್ಲೂಕಿನ ಅನೇಕ ಸರ್ಕಾರಿ ಕಚೇರಿಗಳು ಇನ್ನೂ ಬಾಡಿಗೆ ಕಟ್ಟಡಗಳಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಪ್ರಜಾಸೌಧ ನಿರ್ಮಾಣವಾದರೆ ಸಾರ್ವಜನಿಕರಿಗೆ ಒಂದೇ ಸೂರಿನಡಿ ವಿವಿಧ ಇಲಾಖೆಗಳ ಸೇವೆಗಳು ದೊರೆಯಲಿವೆ ಎಂಬ ನಿರೀಕ್ಷೆ ಇತ್ತು. ಆದರೆ ಜಾಗದ ಆಯ್ಕೆ ಕುರಿತ ವಿವಾದ ಹಾಗೂ ಕಾನೂನು ಹೋರಾಟದಿಂದ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಆತಂಕ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಗುರುತಿಸಲಾದ ಜಾಗದ ಸ್ಥಿತಿ, ಭೂದಾನಿಗಳ ಹಕ್ಕು, ಬಿಡುಗಡೆಯಾದ ಅನುದಾನ ಹಾಗೂ ಟೆಂಡರ್ ಪ್ರಕ್ರಿಯೆಯ ಮುಂದಿನ ಹಂತಗಳ ಕುರಿತು ಸರ್ಕಾರ ಹಾಗೂ ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಈ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಾಸಕ ಶರಣು ಸಲಗರ, ಗ್ರಾಪಂ ಅಧ್ಯಕ್ಷೆ ದೀಪಾರಾಣಿ ಭೋಸ್ಲೆ, ಉಪಾಧ್ಯಕ್ಷೆ ಮೀರಾಬಾಯಿ ಗಾಯಕವಾಡ್, ಉಪತಹಸೀಲ್ದಾರ್ ಸುನೀಲ್‌ಕುಮಾರ್ ಸಜ್ಜನಶೆಟ್ಟಿ, ಕಂದಾಯ ನಿರೀಕ್ಷಕ ಶರಣು ಪವಾಡಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಪಿಡಿಒ ವಿನಯಕುಮಾರ್ ರಾಠೋಡ್, ತಾಲೂಕು ರಚನೆ ಹೋರಾಟ ಸಮಿತಿ ಅಧ್ಯಕ್ಷ ಎಂ.ಜಿ. ರಾಜೋಳೆ, ಜಿಪಂ ಮಾಜಿ ಅಧ್ಯಕ್ಷ ಅನೀಲ್ ಬೂಸಾರೆ, ಜಿಪಂ ಮಾಜಿ ಸದಸ್ಯ ಮಲ್ಲಪ್ಪ ಧಬಾಲೆ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.‌

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X