Bidar | ಉಚಿತ ಕೋಳಿ ಸಾಕಾಣಿಕೆ ತರಬೇತಿ : ಅರ್ಜಿ ಆಹ್ವಾನ

ಬೀದರ್ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಿಲ್ಲೆಯ ರೈತ ಬಾಂಧವರಿಗಾಗಿ ಮೇ 25 ಮತ್ತು 26ರಂದು ಎರಡು ದಿನಗಳ ಕೋಳಿ ಸಾಕಾಣಿಕೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೀದರ್‌ನ ಜಿಲ್ಲಾ ಕೇಂದ್ರ ಗ್ರಂಥಾಲಯದ ಹಿಂಭಾಗದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ತರಬೇತಿ ನಡೆಯಲಿದೆ ಎಂದು ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ತಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ 9902561957 ಸಂಖ್ಯೆಗೆ ಸಂಪರ್ಕಿಸಿ ಮುಂಗಡ ನೋಂದಣಿ ಮಾಡಿಸಿಕೊಳ್ಳಬೇಕು.
ತರಬೇತಿಗೆ ಹಾಜರಾಗುವವರು ಆಧಾರ್ ಕಾರ್ಡ್, ಇತ್ತೀಚಿನ ಎರಡು ಭಾವಚಿತ್ರಗಳು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ತರಬೇಕು ಎಂದು ತಿಳಿಸಲಾಗಿದೆ.
ಒಟ್ಟು 40 ರೈತರಿಗೆ ಮಾತ್ರ ಅವಕಾಶ ಇರುವುದರಿಂದ ಮೊದಲಿಗೆ ನೋಂದಣಿ ಮಾಡಿಸಿಕೊಳ್ಳುವವರಿಗೆ ಆದ್ಯತೆ ನೀಡಲಾಗುತ್ತದೆ. ಈಗಾಗಲೇ ಇದೇ ಕೇಂದ್ರದಲ್ಲಿ ತರಬೇತಿ ಪಡೆದವರಿಗೆ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.




