Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಗಾಂಧೀಜಿ ತಮ್ಮ ವಿಚಾರ...

ಬೀದರ್ | ಗಾಂಧೀಜಿ ತಮ್ಮ ವಿಚಾರ ಪ್ರಸರಣಕ್ಕಾಗಿ ಪತ್ರಿಕಾ ಮಾಧ್ಯಮ ಆಶ್ರಯಿಸಿದ್ದರು : ವೀರಾಂತರೆಡ್ಡಿ ಜಂಪಾ

ವಾರ್ತಾಭಾರತಿವಾರ್ತಾಭಾರತಿ25 Oct 2025 7:05 PM IST
share
ಬೀದರ್ | ಗಾಂಧೀಜಿ ತಮ್ಮ ವಿಚಾರ ಪ್ರಸರಣಕ್ಕಾಗಿ ಪತ್ರಿಕಾ ಮಾಧ್ಯಮ ಆಶ್ರಯಿಸಿದ್ದರು : ವೀರಾಂತರೆಡ್ಡಿ ಜಂಪಾ

ಬೀದರ್ : ಗಾಂಧೀಜಿಯವರು ಜನತೆಯ ಎಲ್ಲ ವಿಷಯಗಳಿಗೂ ಸ್ಪಂದಿಸುತ್ತಿದ್ದರು. ಅವರು ಎಲ್ಲ ಜನರಿಗೂ ಬೇಕಾಗುವ ವ್ಯಕ್ತಿತ್ವವುಳ್ಳವರಾಗಿದ್ದರು. ಇದನ್ನು ಅರಿತ ಅವರು ತಮ್ಮ ವಿಚಾರ ಪ್ರಸರಣಕ್ಕಾಗಿ ಪತ್ರಿಕಾ ಮಾಧ್ಯಮವನ್ನು ಆಶ್ರಯಿಸಿದ್ದರು ಎಂದು ಹುಮನಾಬಾದ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ವೀರಾಂತರೆಡ್ಡಿ ಜಂಪಾ ಅವರು ತಿಳಿಸಿದರು.

ಇಂದು ಹುಮನಾಬಾದ್ ನಗರದ ಎಸ್‌ಬಿಸಿಎಸ್ ಕಲಾ ಮತ್ತು ಎಸ್ ವಿ ವಾಣಿಜ್ಯ, ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಂಡ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಸರ್ವೋದಯ ತತ್ವದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ ಅವರು ಮಾತನಾಡಿದರು.

‘ಇಂಡಿಯನ್ ಒಪೀನಿಯನ್’ ಇಂಗ್ಲಿಷ್‌ ಪತ್ರಿಕೆಯು ಗಾಂಧೀಜಿಯವರ ದಕ್ಷಿಣ ಆಫ್ರಿಕಾದ ಹೋರಾಟದ ಕಾಲದಲ್ಲಿ ಆರಂಭವಾಗಿತ್ತು. ಇನ್ನು ಭಾರತದಲ್ಲಿ 'ಹರಿಜನ’ ಪತ್ರಿಕೆ ಅವರ ಮುಖವಾಣಿಯಾಯಿತು. ಗಾಂಧಿ ತಮ್ಮ ಭಾವನೆ, ಅನಿಸಿಕೆ, ತಾತ್ವಿಕ ಚಿಂತನೆ, ಹೋರಾಟ ಮಾರ್ಗ, ಎಲ್ಲವನ್ನೂ ಹಿಂದಿ, ಗುಜರಾತಿ ಮತ್ತು ಇಂಗ್ಲಿಷ್‌ನಲ್ಲಿ ಪತ್ರಿಕೆಗಳ ಮೂಲಕ ತಿಳಿಸುತ್ತಿದ್ದರು. ಆ ಕಾರಣದಿಂದ ಅವರ ವಿಚಾರದೆಳೆಗಳು ಅನಂತವಾಗಿ ಇಂದಿಗೂ ಅಚ್ಚಿನ ಪ್ರತಿಗಳಲ್ಲಿ ಲಭ್ಯವಾಗಿವೆ ಎಂದರು.

ಗಾಂಧೀಜಿಯವರ ವಿಚಾರಗಳನ್ನು ಪಟ್ಟಿ ಮಾಡುವುದಾದರೆ ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳು, ಆರ್ಥಿಕ ವಿಷಯಗಳು, ಅನುಯಾಯಿಗಳಿಗೆ ನೈತಿಕ ಹೊಣೆಗಾರಿಕೆಯ ಸೂತ್ರಗಳು, ಹೋರಾಟ ಮಾರ್ಗದ ವಿಧಿ ವಿಧಾನ, ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗೆ ಪರಿಹಾರ, ಹಾಗೆಯೇ ಅಸ್ಪಶ್ಯತೆಯ ಬಗ್ಗೆ ಗಟ್ಟಿ ನಿಲುವಿನ ಖಂಡನೆ ಮತ್ತು ಪರಿವರ್ತನೆಯ ಮಾರ್ಗ, ವಿಭಿನ್ನ ಧಾರ್ಮಿಕರ ನಡುವೆ ಸಾಮರಸ್ಯದ ಅಗತ್ಯ, ಗ್ರಾಮಗಳ ಪುನರ್‌ ರಚನೆಯಲ್ಲಿ ನೈರ್ಮಲ್ಯದ ಪ್ರಧಾನ ಉದ್ದೇಶ, ನೂಲುವ ಕ್ರಿಯೆಯ ಮಹತ್ವ, ಅಂತೆಯೇ ಯಾರನ್ನೂ ದ್ವೇಷಿಸದಿರುವ ಮನೋಧರ್ಮದ ತಾತ್ವಿಕತೆಯನ್ನು ಯಾವ ಓದುಗನೂ ಗಾಂಧೀಜಿಯ ಬರಹಗಳಲ್ಲಿ ಕಾಣಬಹುದು ಎಂದು ನುಡಿದರು.

ಯುವ ಸಾಹಿತಿ ಶಕೀಲ್ ಐ.ಎಸ್ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಮನಾಬಾದಿನ ಎಸ್ ಬಿ ಸಿ ಎಸ್ ಕಲಾ ಮತ್ತು ಎಸ್ ವಿ ವಾಣಿಜ್ಯ ವಿಜ್ಞಾನ ಕಾಲೇಜು ಪ್ರಾಚಾರ್ಯ ಪ್ರೊ. ರವೀಂದ್ರನಾಥಪ್ಪ ಕೆ ಅವರು ವಹಿಸಿದ್ದರು.

ಈ ಸಂದರ್ಭದಲ್ಲಿ ಹುಮನಾಬಾದ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ರವೀಂದ್ರಕುಮಾರ್ ಭಂಡಾರಿ, ಚಕೋರ ಸಾಹಿತ್ಯ ಜಿಲ್ಲಾ ಸಂಚಾಲಕಿ ಡಾ. ಮಕ್ತುಂಬಿ ಎಂ, ಸಂಜೀವಿನಿ, ಭಾಗ್ಯಶ್ರೀ, ಪ್ರೊ.ದೀಪಕ್, ಪ್ರೊ.ಪ್ರವೀಣ್ ಈಶ್ವರ್ ಹಾಗೂ ಡಾ. ಸಂಗಪ್ಪ ತೌಡಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X