Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಗಾಂಧೀಜಿಯವರ ತತ್ವಾದರ್ಶಗಳು...

ಬೀದರ್ | ಗಾಂಧೀಜಿಯವರ ತತ್ವಾದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಿಸಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ2 Oct 2025 6:28 PM IST
share
ಬೀದರ್ | ಗಾಂಧೀಜಿಯವರ ತತ್ವಾದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಿಸಿ ಶಿಲ್ಪಾ ಶರ್ಮಾ

ಬೀದರ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸೆ, ಸತ್ಯ ಮತ್ತು ಸರಳತೆಯಿಂದ ಕೂಡಿದ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿಯವರು ಶಾಂತಿಯ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟು, ನುಡಿದಂತೆ ನಡೆದರು. ಹಾಗಾಗಿ ಅವರನ್ನು ನಾವು ರಾಷ್ಟ್ರಪಿತ ಎಂದು ಕರೆಯುತ್ತೆವೆ. ಅವರು ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಟ ಮಾಡಿದ್ದರು. ಭಾರತದಲ್ಲಿ ದಂಡಿ ಸತ್ಯಾಗ್ರಹ, ಅಸಹಕಾರ ಚಳುವಳಿ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಹಲವಾರು ಹೋರಾಟಗಳನ್ನು ಮಾಡುವ ಮೂಲಕ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದರು.

ಗಾಂಧೀಜಿ ದೇಶಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಯುವ ಜನರು ತಿಳಿದುಕೊಳ್ಳಬೇಕಿದೆ. ನಮ್ಮ ಮನೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆ ಕಾಪಾಡಬೇಕು. ಈ ಕುರಿತು ನಮ್ಮ ಅಕ್ಕ ಪಕ್ಕದ ಜನರಿಗೂ ಸ್ವಚ್ಚತೆ ಕಾಪಾಡುವಂತೆ ತಿಳಿ ಹೇಳಬೇಕು. ಸ್ವಚ್ಛ ಪರಿಸರದಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಕರ್ನಾಟಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬಸವರಾಜ್ ಬಲ್ಲೂರ್ ಅವರು ಅತಿಥಿ ಉಪನ್ಯಾಸ ನೀಡಿದರು.

ಗಾಂಧೀ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೀದರ್ ನ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕಿಶೋರ್ ದುಬೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ್ ಶಹಾಬಾದಕರ್, ಶಾಲಾ ಶಿಕ್ಷಣ ಇಲಾಖೆಯ ಸಹಾಯಕ ಯೋಜನಾಧಿಕಾರಿ ಹುಡಗೆ ಗುಂಡಪ್ಪಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸುಳ್ಳೊಳ್ಳಿ, ವಾರ್ತಾ ಇಲಾಖೆಯ ಪ್ರಭಾರಿ ವಾರ್ತಾ ಸಹಾಯಕ ವಿಜಯಕೃಷ್ಣ, ನರೇಶಕುಮಾರ್, ತನ್ವೀರ್ ಇಕ್ಬಾಲ್, ಗೀತಮ್ಮ, ನಾಗಶೆಟ್ಟಿ, ಆಶೀಶ್ ಹಜಾರೆ, ಜಗನ್ನಾಥ್ ಜಮಾದಾರ್ ಹಾಗೂ ಅವಿನಾಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X