ಬೀದರ್ | ಗಾಂಜಾ ವಶ : ಪ್ರಕರಣ ದಾಖಲು

ಬೀದರ್ : ನಗರದ ರೈಲ್ವೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಬೀದರ್ ರೈಲ್ವೆ ನಿಲ್ದಾಣದಲ್ಲಿ ಇಂದು ರೈಲು ಗಾಡಿ ಸಂಖ್ಯೆ 17647 ಹೈದರಾಬಾದ್-ಪೂರ್ಣ ಎಕ್ಸ್ಪ್ರೆಸ್ ರೈಲುಗಾಡಿಯಲ್ಲಿ ಸುಮಾರು 1 ಲಕ್ಷ 52 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಬೀದರ್ ರೈಲ್ವೆ ಪೊಲೀಸ್ ಠಾಣೆಯ ಪಿಎಸ್ಐ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೈದರಾಬಾದ್-ಪೂರ್ಣ ಎಕ್ಸ್ಪ್ರೆಸ್ ರೈಲುಗಾಡಿಯು ಬೀದರ್ ರೈಲ್ವೆ ನಿಲ್ದಾಣದಲ್ಲಿ ಬಂದಾಗ ರೈಲು ಗಾಡಿಯ ಹಿಂದಿನ ಜನರಲ್ ಬೋಗಿಗಳನ್ನು ಪರಿಶೀಲನೆ ಮಾಡುವಾಗ ಬೀದರ್ ರೈಲ್ವೆ ಪೊಲೀಸ್ ಠಾಣೆಯ ಪಿಎಸ್ಐ ಮುಹಮ್ಮದ್ ಪಾಷಾ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದರು ಎಂದು ಅವರು ಹೇಳಿದ್ದಾರೆ.
ದಾಳಿಯಲ್ಲಿ ಸುಮಾರು 1 ಲಕ್ಷ 52 ಸಾವಿರ ರೂ. ಮೌಲ್ಯದ 15 ಕೆ.ಜಿ 200 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಘಟನೆ ಕುರಿತು ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story





