ಬೀದರ್ | ಗಾಂಜಾ ವಶ : ಆರೋಪಿಯ ಬಂಧನ

ಬೀದರ್ : 5 ಲಕ್ಷ 25 ಸಾವಿರ ರೂ. ಮೌಲ್ಯದ 5 ಕೆ.ಜಿ 25 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬಸವಕಲ್ಯಾಣ ನಗರದಲ್ಲಿ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಖಾನಾಪೂರ ಶಿವಾರದ ರಾಜಮಾತಾ ಜೀಜಾವು ನಗರ ಲೇಔಟ್ ಹತ್ತಿರ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಬಂದ ಮೇರೆಗೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ನಾರಾಯಣಪೂರ್ ನೇತೃತ್ವದ ತಂಡ ದಾಳಿ ನಡೆಸಿತ್ತು.
ದಾಳಿ ನಡೆಸಿದಾಗ ಇಬ್ಬರು ವ್ಯಕ್ತಿಗಳು ಲೇಔಟ್ ಹತ್ತಿರ ನಿಂತಿದ್ದು, ಅವರ ಹತ್ತಿರವಿರುವ ಒಂದು ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾ ಇರುವುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





