ಬೀದರ್ | ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ : ಆರೋಪಿಯ ಬಂಧನ

ಬೀದರ್ : ಹುಮನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಘೋಡವಾಡಿ ಗ್ರಾಮದ ಹತ್ತಿರ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಘೋಡವಾಡಿ ಗ್ರಾಮದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ರಸ್ತೆಯ ಮೇಲೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಹುಮನಾಬಾದ್ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಹುಮನಾಬಾದ್ ಪೊಲೀಸ್ ಠಾಣೆಯ ಹುಲೆಪ್ಪಾ ಅವರು ದಾಳಿ ನಡೆಸಿದ್ದಾರೆ. ಈ ವೇಳೆ 3 ಲಕ್ಷ 90 ಸಾವಿರ ರೂ. ಮೌಲ್ಯದ 3 ಕೆ.ಜಿ 920 ಗ್ರಾಂ ಗಾಂಜಾ, 750 ರೂ. ನಗದು ಹಣ ಮತ್ತು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





