ಬೀದರ್ | ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ; ಇಬ್ಬರ ಬಂಧನ

ಬೀದರ್ : ನಗರದ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಗಾಂಧಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಇರಾನಿಗಲ್ಲಿ ಒಳಗಡೆ ಹೋಗುವ ಸಾರ್ವಜನಿಕ ಸ್ಥಳದಲ್ಲಿ ರಸ್ತೆಯ ಮೇಲೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ 2,10,800 ರೂ. ಮೌಲ್ಯದ ಗಾಂಜಾ ಮತ್ತು 700 ರೂ. ನಗದು ಹಣ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಜಿಲ್ಲೆಯನ್ನು ಗಾಂಜಾ ಮುಕ್ತ ಜಿಲ್ಲೆಯನ್ನಾಗಿಸಲು ಪೊಲೀಸರ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ಎಸ್ಪಿ ಪ್ರದೀಪ್ ಗುಂಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story





