ಬೀದರ್ | ಬಾಲಕಿ ಮೇಲೆ ಅತ್ಯಾಚಾರ ಆರೋಪ : ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ
ಔರಾದ್ : ಪಟ್ಟಣದ ಯುವಕನೊಬ್ಬ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಬುಧವಾರ ಔರಾದ್ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.
30 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಾಲಕಿ ಹಾಗೂ ಯುವಕ ಒಂದೇ ಬಡಾವಣೆಯಲ್ಲಿ ವಾಸವಿದ್ದು, ಬಾಲಕಿ ಕುಟುಂಬಸ್ಥರಿಗೂ ಮತ್ತು ಯುವಕನಿಗೆ ಪರಿಚಯವಿತ್ತು. ಯುವಕ ಆಗಾಗ ಬಾಲಕಿ ಜತೆ ಅನುಚಿತವಾಗಿ ವರ್ತಿಸುತ್ತಿದ್ದ. ಈ ಕುರಿತು ಬಾಲಕಿ ಪಾಲಕರಲ್ಲಿ ವಿಷಯ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story





