ಬೀದರ್ | ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ ಆರೋಪ : ಪೋಕ್ಸೋ ಪ್ರಕರಣ ದಾಖಲು

ಬೀದರ್ : 9ನೇ ತರಗತಿಯ ಬಾಲಕಿ ಮೇಲೆ ಶಿಕ್ಷಕನೊರ್ವ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ಆ.28ರಂದು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಗ್ರಾಮವೊಂದರಲ್ಲಿ ಬಾಲಕಿಯು ಶಾಲೆಗೆ ಹೋದಾಗ, ಶಿಕ್ಷಕನೊರ್ವ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಶಿಕ್ಷಕನು ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರಕುಳ ನೀಡುತ್ತಿದ್ದ. ಬಾಲಕಿಯು ತನ್ನ ಪೋಷಕರಿಗೆ ಈ ವಿಷಯ ತಿಳಿಸುತ್ತೇನೆ ಎಂದಾಗ ಶಿಕ್ಷಕನು ನಿಮ್ಮ ತಂದೆಯನ್ನು ಕೊಲೆ ಮಾಡುತ್ತೇನೆ ಎಂದು ಬಾಲಕಿಯನ್ನು ಹೆದರಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಬಾಲಕಿಯು ಶಾಲೆಗೆ ಹೋಗುವುದಿಲ್ಲ ಎಂದು ಅಳುತ್ತಾ ಹಠ ಹಿಡಿದಿದ್ದಾಗ ಪೋಷಕರು ಈ ಕುರಿತು ಬಾಲಕಿಯ ಬಳಿ ವಿಚಾರಿಸಿದಾಗ ಬಾಲಕಿಯು ಘಟನೆಯನ್ನು ವಿವರಿಸಿದ್ದಾಳೆ ಎಂದು ತಿಳಿದು ಬಂದಿದೆ.
Next Story





