ಬೀದರ್ | ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಜನಪ್ರಿಯ ಬರಹಗಾರರಾಗಿದ್ದರು : ಅಶೋಕ್ ರಾಜೋಳೆ

ಬೀದರ್ : ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ತಮ್ಮ ಹಾಸ್ಯ, ಕಾದಂಬರಿ, ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಹೆಸರುವಾಸಿಯಾದ ಜನಪ್ರಿಯ ಬರಹಗಾರರಾಗಿದ್ದಾರೆ ಎಂದು ಅಶೋಕ್ ರಾಜೋಳೆ ಅವರು ಹೇಳಿದರು.
ಮಂಗಳವಾರ ಭಾಲ್ಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಚಕೋರ ಕಾರ್ಯಕ್ರಮದಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಬದುಕು ಬರಹ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗೊರೂರು ರಾಮಸ್ವಾಮಿ ಅಯ್ಯಂಗಾರ್ ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ್ದರು ಎಂದು ತಿಳಿಸಿದರು.
ಆರತಿ ಪಾತ್ರೆ, ಡಾ.ಮಕ್ತುಂಬಿ ಎಂ. ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಡಾ.ನಾಗಮ್ಮ ಹೆಚ್, ಡಾ.ಹೇಮಾವತಿ ಪಾಟೀಲ್, ನಾಗಭೂಷಣ ಮಾಮಡಿ, ಡಾ.ಮೀನಾಕ್ಷಿ, ಡಾ.ಜಯಶ್ರೀ ಹಾಗೂ ಡಾ.ಸಂಪತಕುಮಾರಿ ಸೇರಿದಂತೆ ಇತರರು ಇದ್ದರು.





