Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಮಾದಕ ವಸ್ತು, ಡಿಜಿಟಲ್...

Bidar | ಮಾದಕ ವಸ್ತು, ಡಿಜಿಟಲ್ ಅಡಿಕ್ಷನ್ ವಿರುದ್ಧ ಸರ್ಕಾರದ ಕ್ರಮ ಸ್ವಾಗತ : ಡಾ.ಅಬ್ದುಲ್ ಖದೀರ್

ವಾರ್ತಾಭಾರತಿವಾರ್ತಾಭಾರತಿ7 March 2026 7:33 PM IST
share
Bidar | ಮಾದಕ ವಸ್ತು, ಡಿಜಿಟಲ್ ಅಡಿಕ್ಷನ್ ವಿರುದ್ಧ ಸರ್ಕಾರದ ಕ್ರಮ ಸ್ವಾಗತ : ಡಾ.ಅಬ್ದುಲ್ ಖದೀರ್

ಬೀದರ್: ಕರ್ನಾಟಕ ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಮಾದಕ ವಸ್ತುಗಳ ಅಡಿಕ್ಷನ್ ಹಾಗೂ ಡಿಜಿಟಲ್ ಅಡಿಕ್ಷನ್ ವಿರುದ್ಧ ಕೈಗೊಂಡಿರುವ ಕ್ರಮಗಳನ್ನು ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಹಾಗೂ ಜಿಲ್ಲೆಯ ವಿವಿಧ ನಾಗರಿಕ ಸಂಘಟನೆಗಳು ಸ್ವಾಗತಿಸಿವೆ ಎಂದು ಸಮಿತಿಯ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಬೀದರ್ ಸನ್ಮಾರ್ಗ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ಬಳಕೆ ಮತ್ತು ಡಿಜಿಟಲ್ ಅಡಿಕ್ಷನ್ ಇಂದಿನ ಸಮಾಜದಲ್ಲಿ ಗಂಭೀರ ಸಾಮಾಜಿಕ ಹಾಗೂ ಸಾರ್ವಜನಿಕ ಆರೋಗ್ಯದ ಸಮಸ್ಯೆಗಳಾಗಿ ರೂಪುಗೊಂಡಿವೆ ಎಂದು ತಿಳಿಸಿದರು.

ಯುವಕರು, ವಿದ್ಯಾರ್ಥಿಗಳು ಹಾಗೂ ಕುಟುಂಬಗಳನ್ನು ವ್ಯಾಪಕವಾಗಿ ಪರಿಣಾಮಗೊಳಿಸುತ್ತಿರುವ ಈ ಸಮಸ್ಯೆಗಳನ್ನು ಸರ್ಕಾರ ಗುರುತಿಸಿ ಕ್ರಮ ಕೈಗೊಂಡಿರುವುದು ಸಮಯೋಚಿತ ಹಾಗೂ ಶ್ಲಾಘನೀಯ ಹೆಜ್ಜೆಯಾಗಿದೆ. ಯುವಜನತೆಯಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ವಿಶೇಷವಾಗಿ ಕೃತಕ (ಸಿಂಥೆಟಿಕ್) ಮಾದಕ ವಸ್ತುಗಳು ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿಯೂ ಸುಲಭವಾಗಿ ಲಭ್ಯವಾಗುತ್ತಿರುವುದು ಪೋಷಕರು ಹಾಗೂ ಶಿಕ್ಷಣ ತಜ್ಞರಲ್ಲಿ ಚಿಂತೆ ಹೆಚ್ಚಿಸಿದೆ ಎಂದು ಹೇಳಿದರು.

ಮೊಬೈಲ್ ಫೋನ್, ಸಾಮಾಜಿಕ ಜಾಲತಾಣಗಳು ಹಾಗೂ ಆನ್‌ಲೈನ್ ಗೇಮಿಂಗ್‌ಗಳ ಅತಿಯಾದ ಬಳಕೆಯಿಂದ ಉಂಟಾಗುವ ಡಿಜಿಟಲ್ ಅಡಿಕ್ಷನ್ ಮಕ್ಕಳ ಮತ್ತು ಕಿಶೋರರ ನಡುವೆ ವೇಗವಾಗಿ ಹೆಚ್ಚುತ್ತಿರುವ ಸಮಸ್ಯೆಯಾಗಿದೆ. ದೀರ್ಘಕಾಲ ಪರದೆ ಬಳಕೆಯಿಂದ ಗಮನದ ಕೊರತೆ, ಆತಂಕ, ನಿದ್ರಾಹೀನತೆ, ಕಣ್ಣು ನೋವು, ತಲೆನೋವು ಹಾಗೂ ಸಾಮಾಜಿಕ ದೂರವಾಗುವಿಕೆ ಮುಂತಾದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು.

ಶಾಲೆ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಡೆಯುವ ಮಾದಕ ವಸ್ತುಗಳ ಮಾರಾಟ ಮತ್ತು ಸಂಬಂಧಿತ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿವೆ. ವಿದ್ಯಾರ್ಥಿಗಳನ್ನು ರಕ್ಷಿಸಲು ಕಠಿಣ ಕಾನೂನು ಕ್ರಮಗಳು ಹಾಗೂ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಸಮಿತಿಯ ಕಾರ್ಯದರ್ಶಿ ಅಶೋಕ ವಡಗಾವೆ ಮಾತನಾಡಿ, ಯುವಜನತೆಯನ್ನು ಮಾದಕ ವಸ್ತುಗಳ ದುರುಪಯೋಗ ಮತ್ತು ಅತಿಯಾದ ಡಿಜಿಟಲ್ ಬಳಕೆಯಿಂದ ರಕ್ಷಿಸುವುದು ಕರ್ನಾಟಕದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಅತ್ಯಂತ ಮುಖ್ಯವಾಗಿದೆ. ಈ ಸಂಬಂಧ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ಹಾಗೂ ಸಮುದಾಯ ಮಟ್ಟದ ಚಟುವಟಿಕೆಗಳಲ್ಲಿ ಸರ್ಕಾರದೊಂದಿಗೆ ಸಹಕರಿಸಲು ಸಂಘಟನೆಗಳು ಸಿದ್ಧವಾಗಿವೆ ಎಂದು ತಿಳಿಸಿದರು.

ಸಮಿತಿಯ ಉಪಾಧ್ಯಕ್ಷ ಡಾ. ರಾಜಶೇಖರ್ ಸೇಡಂಕರ್ ಮಾತನಾಡಿ, ವ್ಯಸನಮುಕ್ತ, ಭಿಕ್ಷಾಟನೆ ಮುಕ್ತ ಮತ್ತು ಸರಳ ವಿವಾಹ ಪ್ರೋತ್ಸಾಹಿಸುವ ಬೀದರ್ ಜಿಲ್ಲೆಯನ್ನಾಗಿ ರೂಪಿಸುವುದು ಸಮಿತಿಯ ಗುರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಬಸವರಾಜ್ ಮಾಳಗೆ, ಸುರೇಶ್ ಚನಶೆಟ್ಟಿ, ಶಂಭುಲಿಂಗ್ ವಾಲ್ದೊಡ್ಡಿ ಸೇರಿದಂತೆ ಇತರರು ಇದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X