Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬಗದಲ್ ಗ್ರಾಮಕ್ಕೆ ಜಿಪಂ ಸಿಇಒ...

Bidar | ಬಗದಲ್ ಗ್ರಾಮಕ್ಕೆ ಜಿಪಂ ಸಿಇಒ ಭೇಟಿ: ವಿವಿಧ ಯೋಜನೆ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ4 Nov 2026 5:27 PM IST
share
Bidar | ಬಗದಲ್ ಗ್ರಾಮಕ್ಕೆ ಜಿಪಂ ಸಿಇಒ ಭೇಟಿ: ವಿವಿಧ ಯೋಜನೆ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಬೀದರ್: ‘ಬೆಳಗಿನ ನಡೆ ಗ್ರಾಮಗಳ ಕಡೆ’ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಅವರು ಬುಧವಾರ ಬೀದರ್ ತಾಲೂಕಿನ ಬಗದಲ್ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು.

ಈ ವೇಳೆ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಸಿಇಒ, ಗ್ರಾಮದ ನೀರಿನ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮದ ವಿವಿಧ ಓಣಿಗಳಲ್ಲಿ ಸಂಚರಿಸಿದ ಅವರು, ಚರಂಡಿ, ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಪರಿಶೀಲಿಸಿದರು. ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (ಪಿಎಚ್‌ಸಿ) ಭೇಟಿ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಸ್ವಚ್ಛತೆ ಸೇರಿದಂತೆ ಹಲವು ವ್ಯವಸ್ಥೆಗಳನ್ನು ತಪಾಸಣೆ ನಡೆಸಿದರು.

ರೋಗಿಗಳಿಗೆ ವಿತರಿಸುವ ಮಾತ್ರೆಗಳು ಹಾಗೂ ಔಷಧಗಳ ದಾಸ್ತಾನು ಸಮರ್ಪಕವಾಗಿದೆಯೇ ಎಂಬುದನ್ನು ಫಾರ್ಮಸಿಯಲ್ಲಿ ಪರಿಶೀಲಿಸಿದರು. ನಂತರ ಪ್ರಯೋಗಾಲಯಕ್ಕೆ ಭೇಟಿ ನೀಡಿ, ಅಲ್ಲಿನ ಪರೀಕ್ಷಾ ವ್ಯವಸ್ಥೆಗಳನ್ನು ವೀಕ್ಷಿಸಿದರು. ವೈದ್ಯರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆಯೇ ಎಂಬ ಬಗ್ಗೆಯೂ ಮಾಹಿತಿ ಪಡೆದರು.

ಗ್ರಾಮದಲ್ಲಿ ನಡೆಯುತ್ತಿರುವ ವಿಬಿ-ಜಿ ರಾಮ್‌ ಜಿ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿದ ಅವರು, ಕಾಮಗಾರಿಯನ್ನು ವೀಕ್ಷಿಸುವುದಕ್ಕೆ ಮಾತ್ರ ಸೀಮಿತವಾಗದೆ, ಅಲ್ಲಿನ ಕಾರ್ಮಿಕರೊಂದಿಗೆ ತಾವೂ ಕೆಲಸದಲ್ಲಿ ತೊಡಗಿಸಿಕೊಂಡು ಶ್ರಮದಾನ ಮಾಡಿದರು. ಈ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್, ಸಹಾಯಕ ನಿರ್ದೇಶಕಿ ಲಕ್ಷ್ಮಿ ಬಿರಾದರ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಸಂಜುಕುಮಾರ್, ಟಿಸಿ ವಿಷ್ಣು ಕುಲಕರ್ಣಿ, ಟಿಎ ಜುನೇದ್ ವಿನಾಯಕ್, ಐಇಸಿ ಸಂಯೋಜಕ ಸತ್ಯಜೀತ್ ನೀಡೋದಿಕರ್ ಹಾಗೂ ಇತರರು ಉಪಸ್ಥಿತರಿದ್ದರು.

Tags

BagadalBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X