Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಹೇಮರೆಡ್ಡಿ ಮಲ್ಲಮ್ಮನ ಬದುಕು...

ಬೀದರ್ | ಹೇಮರೆಡ್ಡಿ ಮಲ್ಲಮ್ಮನ ಬದುಕು ಮನುಕುಲಕ್ಕೆ ಆದರ್ಶ : ಸಚಿವ ರಹೀಮ್ ಖಾನ್

ವಾರ್ತಾಭಾರತಿವಾರ್ತಾಭಾರತಿ10 May 2025 6:57 PM IST
share
Photo of Program

ಬೀದರ್ : ಶಿವಶರಣರಲ್ಲಿ ಪ್ರಜ್ವಲಿಸಿದ ಹೇಮರೆಡ್ಡಿ ಮಲ್ಲಮ್ಮ ದೈವಭಕ್ತಿ, ಕಾಯಕ ನಿಷ್ಠೆ, ದಾನ ಧರ್ಮದಿಂದ, ಆದರ್ಶ ಗೃಹಿಣಿಯಾಗುವ ಮೂಲಕ ಲೋಕ ಪ್ರಸಿದ್ಧಿ ಪಡೆದಿದ್ದರು. ಶ್ರೀಶೈಲ ಮಲ್ಲಿಕಾರ್ಜುನನ್ನು ಸಾಕ್ಷಾತ್ಕರಿಸಿಕೊಂಡ ಹೇಮರೆಡ್ಡಿ ಮಲ್ಲಮ್ಮನ ಬದುಕು ಎಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರು ಹೇಳಿದರು.

ಇಂದು ನಗರದ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮರು ಕೇವಲ ಒಂದು ಜಾತಿಗೆ ಸೀಮಿತರಾಗಬಾರದು. ಹೇಮರೆಡ್ಡಿ ಮಲ್ಲಮ್ಮರ ಆದರ್ಶಗಳು ತಾವೆಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸನ್ಮಾರ್ಗದಲ್ಲಿ ಸಾಗಬೇಕು ಎಂದರು.

ಶಾಸಕ ಡಾ.ಶೈಲೆಂದ್ರ ಬೆಲ್ದಾಳೆ ಅವರು ಮಾತನಾಡಿ, ಹೇಮರೆಡ್ಡಿ ಮಲ್ಲಮ್ಮ ಅವರು ಪರಮ ಶಿವಭಕ್ತೆ. ತಮ್ಮ ಸಮಾಜದವರದ್ದು ಬೇಡುವ ಕೈಯಾಗಬಾರದು ನೀಡುವ ಕೈಯಾಗಬೇಕು ಎನ್ನುವುದು ಮಲ್ಲಮ್ಮನವರ ಆಸೆಯಾಗಿತ್ತು. ಅದರಂತೆಯೇ ರೆಡ್ಡಿ ಸಮಾಜ ಈಗ ಬಲಿಷ್ಠ ಸಮಾಜವಾಗಿದೆ. ಆ ಸಮಾಜದವರ ಮನವಿಯಂತೆ ಸಮುದಾಯ ಭವನಕ್ಕಾಗಿ 15 ಲಕ್ಷ ರೂ. ಅನುದಾನ ನೀಡಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ, ಸರ್ಕಾರಿ ಸೇವೆಗೆ ಆಯ್ಕೆಯಾದ, ಮುಂಬಡ್ತಿ ಹೊಂದಿದ, ನಿವೃತ್ತರಾದ ಹಾಗೂ ಎಂ.ಬಿ.ಬಿ.ಎಸ್ ಪದವಿ ಪಡೆದವರಿಗೆ ಸನ್ಮಾನಿಸಲಾಯಿತು.

ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ರಹೀಮ್ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಹಾಗೂ ಸಮುದಾಯದ ಮುಖಂಡರು ಸೇರಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ನಂತರದಲ್ಲಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕ ಶಿವಶರಣಪ್ಪಾ ಹುಗ್ಗಿ ಪಾಟೀಲ್, ನಗರಸಭೆ ಸದಸ್ಯ ರಾಜು ಚಿಂತಾಮಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಶಿಂಧೆ, ಎನ್.ವಿ.ಗುರೂಜಿ, ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶಂಕರ್ ರೆಡ್ಡಿ ಚಿಟ್ಟಾ, ನಿವೃತ್ತ ಎಡಿಸಿ ಬಾಬುರೆಡ್ಡಿ ಸಂಗ್ರಾಮ್ ರೆಡ್ಡಿ, ಗೋಪಾಲ್ ರೆಡ್ಡಿ, ರವಿ ರೆಡ್ಡಿ, ಚಂದ್ರಶೇಖರ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X