Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಅನುದಾನ ರಹಿತ ಕನ್ನಡ ಮಾಧ್ಯಮ...

Bidar | ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ನೆರವು ನೀಡುವಂತೆ ಆಗ್ರಹಿಸಿ ಸೆ.9 ರಿಂದ ಅನಿರ್ದಿಷ್ಟಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ7 Sept 2026 7:19 PM IST
share
Bidar | ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ನೆರವು ನೀಡುವಂತೆ ಆಗ್ರಹಿಸಿ ಸೆ.9 ರಿಂದ ಅನಿರ್ದಿಷ್ಟಾವಧಿ ಧರಣಿ

ಬೀದರ್, ಸೆ. 8: ಕಲ್ಯಾಣ ಕರ್ನಾಟಕ ಭಾಗದ ಅನುದಾನ ರಹಿತ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಿ, ಕೆಕೆಆರ್‌ಡಿಬಿ ಅನುದಾನದಡಿ ನೆರವು ನೀಡುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕದ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಸೆಪ್ಟೆಂಬರ್ 9ರಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಚೇರಿ ಎದುರು ಅನಿರ್ದಿಷ್ಟಾವಧಿ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದೆ.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಸುನಿಲ್ ಹುಡಗಿ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಯಾವುದೇ ಘೋಷಣೆ ಅಥವಾ ಗದ್ದಲವಿಲ್ಲದೆ ವಚನಗಳು ಹಾಗೂ ತತ್ವಪದಗಳನ್ನು ಹಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಸತ್ಯಾಗ್ರಹ ನಡೆಸಲಾಗುವುದು ಎಂದು ಹೇಳಿದರು.

ಕೆಕೆಆರ್‌ಡಿಬಿಯ 5 ಸಾವಿರ ಕೋಟಿ ರೂ. ಅನುದಾನದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿರುವ ಶೇ.15ರಷ್ಟು ಪಾಲನ್ನು ಶೇ.30ಕ್ಕೆ ಹೆಚ್ಚಿಸಬೇಕು. ಅದರಲ್ಲಿ ಕನಿಷ್ಠ ಶೇ.5ರಷ್ಟು ಅನುದಾನವನ್ನು ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಇತರ ಮಾಧ್ಯಮದ ಖಾಸಗಿ ಶಾಲೆಗಳಿಗೆ ನೇರ ಹಣಕಾಸಿನ ನೆರವು ನೀಡುವ ಬದಲು ಹೆಚ್ಚುವರಿ ಕೊಠಡಿಗಳು, ಶೌಚಾಲಯ, ಕಾಂಪೌಂಡ್, ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯ, ಸ್ಮಾರ್ಟ್ ಬೋರ್ಡ್ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಅನುದಾನ ರಹಿತ ಖಾಸಗಿ ಶಾಲೆಗಳು ಶೇ.90ಕ್ಕೂ ಹೆಚ್ಚು ಫಲಿತಾಂಶ ನೀಡುತ್ತಿದ್ದರೂ ಸರ್ಕಾರ ಅವುಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ ಅವರು, ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲು ಉದ್ದೇಶಿಸಿರುವ ಶೇ.7.5ರಷ್ಟು ಮೀಸಲಾತಿ ಜಾರಿಗೊಳಿಸಬಾರದು ಎಂದರು.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ)ಯನ್ನು 2013ರ ಮೂಲ ಸ್ವರೂಪದಲ್ಲೇ ಮರು ಜಾರಿಗೊಳಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ಇದೇ ವೇಳೆ, ಕೋಚಿಂಗ್ ಸೆಂಟರ್‌ಗಳ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿ ಸೆಪ್ಟೆಂಬರ್ 21ರಂದು ಬೀದರ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸುನಿಲ್ ಹುಡಗಿ ತಿಳಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ವಿಭಾಗೀಯ ಉಪಾಧ್ಯಕ್ಷ ಓಂಕಾರೇಶ್ವರ್‌ ವಿಶ್ವನಾಥಪ್ಪ, ಖಜಾಂಚಿ ಮಂಜುರ್ ಇರ್ಫಾನ್, ವಿಭಾಗೀಯ ಕಾರ್ಯದರ್ಶಿ ಅರುಣಕುಮಾರ್‌ ಪೋಚಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುನಾಥ್ ರಡ್ಡಿ, ಜಿಲ್ಲಾ ಉಪಾಧ್ಯಕ್ಷ ಮುಕ್ರಂ ಪಟೇಲ್‌, ಜಿಲ್ಲಾ ಖಜಾಂಚಿ ಗಣಪತಿ ಸೋಲಪುರೆ, ಬಸವಕಲ್ಯಾಣ ತಾಲೂಕಾಧ್ಯಕ್ಷ ಧನರಾಜ್‌ ದೊಡಮನಿ, ಬೀದರ್ ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸಯ್ಯದ್ ಅಹೆಮ್ಮದ್ ಮುದ್ದೆ, ಹಿರಿಯ ಮುಖಂಡರಾದ ಗುಂಡಯ್ಯ ತೀರ್ಥಾ, ಔರಾದ್ ತಾಲೂಕಾಧ್ಯಕ್ಷ ಗುರುನಾಥ್ ದೇಶಮುಖ, ಕಮಲನಗರ ತಾಲೂಕಾಧ್ಯಕ್ಷ ರಾಜಕುಮಾರ್‌ ಹಮಿಲಪುರೆ ಹಾಗೂ ಭಾಲ್ಕಿ ತಾಲೂಕಾಧ್ಯಕ್ಷ ಸುಭಾಷ್ ಹುಲಸುರೆ ಇದ್ದರು.

Tags

protestBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X