Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಮುಖ್ಯ ಚುನಾವಣಾ ಆಯುಕ್ತರ...

Bidar | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Nov 2026 7:31 PM IST
share
Bidar | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ

ಬೀದರ್: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಸೇರಿದಂತೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂಡಿಯಾ ಮೈತ್ರಿಕೂಟದ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ಹಾಗೂ ಪಾರದರ್ಶಕತೆ ಇಲ್ಲದೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಇದರ ಮೂಲಕ ದೇಶದ ಕೋಟ್ಯಂತರ ಜನರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರ ನಡೆದಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್ ರದ್ದುಗೊಳಿಸುವುದರ ಜತೆಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ತಿದ್ದುಪಡಿ ತರಬೇಕು. ಈ ಹಿಂದೆ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಲ್ಲಿ ಪ್ರಧಾನಮಂತ್ರಿ, ಪ್ರತಿಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿ ಸದಸ್ಯರಾಗಿದ್ದರು. ಆದರೆ ಈಗಿನ ವ್ಯವಸ್ಥೆಯಲ್ಲಿ ಮುಖ್ಯ ನ್ಯಾಯಮೂರ್ತಿಯವರ ಬದಲಿಗೆ ಕೇಂದ್ರ ಗೃಹ ಸಚಿವರನ್ನು ಸೇರಿಸಿರುವುದು ಸ್ವತಂತ್ರ ಹಾಗೂ ನಿಷ್ಪಕ್ಷಪಾತ ನೇಮಕಾತಿ ವ್ಯವಸ್ಥೆಗೆ ಧಕ್ಕೆ ತರುತ್ತದೆ. ಹೀಗಾಗಿ ಹಿಂದಿನ ವ್ಯವಸ್ಥೆಯನ್ನು ಮರುಸ್ಥಾಪಿಸುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.

ಮುಖ್ಯ ಚುನಾವಣಾ ಆಯುಕ್ತರಿಗೆ ನೀಡಿರುವ ಕಾನೂನು ವಿನಾಯಿತಿಯನ್ನು ರದ್ದುಗೊಳಿಸಬೇಕು. ದೇಶದ ಪ್ರತಿಯೊಬ್ಬರೂ ಕಾನೂನಿನ ಮುಂದೆ ಹೊಣೆಗಾರರಾಗಿರುವಂತೆ ಚುನಾವಣಾ ಆಯುಕ್ತರೂ ತಮ್ಮ ಕಾರ್ಯಗಳಿಗೆ ಹೊಣೆಗಾರರಾಗಿರಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂಡಿಯಾ ಮೈತ್ರಿಕೂಟದ ಹೋರಾಟ ದೆಹಲಿಯಿಂದ ಹಳ್ಳಿಗಳವರೆಗೆ ನಿರಂತರವಾಗಿ ನಡೆಯಲಿದೆ. ಇತ್ತೀಚಿನ ವಿಧಾನ ಪರಿಷತ್ ಚುನಾವಣೆಗಳಲ್ಲಿ ವಾರಾಣಸಿ, ಪಾಟ್ನಾ ಹಾಗೂ ನಾಗಪುರದಂತಹ ಪ್ರದೇಶಗಳಲ್ಲಿಯೂ ಬಿಜೆಪಿ ಸೋಲು ಅನುಭವಿಸಿರುವುದು ಜನರ ಬದಲಾದ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಪಕ್ಷದ ಸೂಚನೆಯಂತೆ ಮುಂದಿನ ಐದು ದಿನಗಳಲ್ಲಿ ಬೀದರ್ ಜಿಲ್ಲೆಯ 12 ಬ್ಲಾಕ್‌ಗಳಲ್ಲಿಯೂ ಪ್ರತಿಭಟನೆ ನಡೆಸಲಾಗುವುದು. ಬಳಿಕ ಒಂದು ವಾರದ ಅಂತರದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಹೋರಾಟ ಹಮ್ಮಿಕೊಳ್ಳಲಾಗುವುದು. ತಮ್ಮ ನಾಲ್ಕು ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬಾಬುರಾವ್ ಹೊನ್ನಾ, ವಿಠಲ್‌ದಾಸ್ ಪ್ಯಾಗೆ, ಸಂತೋಷ ಚಿಟಗುಪ್ಪಾ, ರೇಷ್ಮಾ ಹಂಸರಾಜ್ ಹಾಗೂ ಓಂಪ್ರಕಾಶ್ ರೊಟ್ಟೆ ಸೇರಿದಂತೆ ಹಲವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ್ ಅರಳಿ, ಅಮೃತರಾವ್ ಚಿಮಕೋಡೆ, ಬಸವರಾಜ್ ಮಾಳಗೆ, ನಿಜಾಮುದ್ದಿನ್, ಗುರುನಾಥ್ ಗಡ್ಡೆ, ದತ್ತು ಮೂಲಗೆ, ಶ್ರೀಕಾಂತ್ ಸ್ವಾಮಿ, ಡಾ. ಮಕ್ಸುದ್ ಚಂದಾ, ಗೋವರ್ಧನ್ ರಾಠೋಡ್, ಸಂತೋಷ ಜೊಳದಾಬಕೆ, ಗೀತಾ ಚಿದ್ರಿ, ಅಬ್ದುಲ್ ಸತ್ತಾರ್ ಮಂದಕನಳ್ಳಿ, ಬಸವರಾಜ್ ಭತಮುರಗೆ, ಎಂ.ಎ. ಸಮಿ, ನಾಸೀರ್ ಖಾದ್ರಿ, ಪಂಡಿತ್ ಚಿದ್ರಿ, ಜಾರ್ಜ್ ಫರ್ನಾಂಡಿಸ್, ಹಣಮಂತ್ ಮಲ್ಕಾಪೂರೆ, ಮೊಹಮ್ಮದ್ ಯುಸೂಫ್, ಅಶೋಕ್ ಚೌಹಾನ್, ಅಜಮತ್ ಪಟೇಲ್, ವೈಜಿನಾಥ್ ಯನಗುಂದಾ, ಅನಿಲ್ ಜಾಧವ್, ಮಾರುತಿ ಮಾಸ್ಟರ್, ಜಗದೀಶ್ ಬಿರಾದಾರ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

ProtestsINDIA allianceBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X