ಬೀದರ್ | ಲಕ್ಷಾಂತರ ರೂ. ಮೌಲ್ಯದ ಆಭರಣ ಕಳವು : ಪ್ರಕರಣ ದಾಖಲು

ಬೀದರ್ : ಹುಮನಾಬಾದ್ ಪಟ್ಟಣದ ಗಾಂಧಿನಗರ್ ನಲ್ಲಿರುವ ಕಿರಿಯ ಇಂಜಿನಿಯರ್ ಒಬ್ಬರ ಮನೆಯಲ್ಲಿ 1 ಲಕ್ಷ 80 ಸಾವಿರ ರೂ. ಮೌಲ್ಯದ 2 ತೊಲೆ ಚಿನ್ನಾಭರಣ ಹಾಗೂ 1 ಲಕ್ಷ ರೂ. ನಗದು ಹಣ ಕಳ್ಳತನ ಮಾಡಿಕೊಂಡು ಹೋಗಲಾಗಿದ್ದು, ರವಿವಾರ ಪ್ರಕರಣ ದಾಖಲಾಗಿದೆ.
ಕೆಪಿಟಿಸಿಎಲ್ ನಲ್ಲಿ ಕಿರಿಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ರಮೇಶ್ ಎನ್ನುವ ಅಧಿಕಾರಿಯ ಮನೆಯಲ್ಲಿ ಕಳ್ಳತನವಾಗಿದೆ. ಇವರಿಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಪುಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನೊಬ್ಬರು ಬೆಂಗಳೂರಲ್ಲಿ ಓದುತ್ತಿದ್ದಾರೆ. ಇವರ ಪತ್ನಿಗೆ ಹುಷಾರಿಲ್ಲದ ಕಾರಣ ಅವರು ತವರು ಮನೆಗೆ ಹೋಗಿದ್ದರು. ರಮೇಶ್ ಅವರು ಶನಿವಾರ ರಾತ್ರಿ ಕರ್ತವ್ಯದಲ್ಲಿದ್ದಾಗ ಮನೆಯಲ್ಲಿ ಯಾರು ಇಲ್ಲದ್ದು ನೋಡಿ ಕಳ್ಳತನ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
Next Story





