ಬೀದರ್ | ಜು.26ರಂದು ಉದ್ಯೋಗ ಮೇಳ; ಹೆಸರು ನೋಂದಣಿಗೆ ಮನವಿ
ಬೀದರ್ : ನಗರದಲ್ಲಿ ಜು.26 ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಅಭ್ಯರ್ಥಿಗಳು ಹೆಸರು ನೋಂದಾಯಿಸಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಯಿಂದ 3 ಗಂಟೆವರೆಗೆ ನಗರದ ಕುಮಬಾರವಾಡಾ ಕ್ರಾಸ್ ನ ಐಟಿಐ ಕಾಲೇಜ್ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದರಿಂದ ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 91549 55835, 99015 63260, 91647 41989 ಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೋಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನೀಮಯ ಕಚEರಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story







