ಬೀದರ್ | ಸೆ.28 ರಂದು ಉದ್ಯೋಗ ಮೇಳ

ಬೀದರ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೆ.28ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಭಾಕರ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸುತ್ತಿದ್ದು, ಈ ಮೇಳದಲ್ಲಿ ಯುವನಿಧಿ ಫಲಾನುಭವಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಯುವನಿಧಿ ಅಭ್ಯರ್ಥಿಗಳು ತಪ್ಪದೇ ಈ ಮೇಳದಲ್ಲಿ ಪಾಲ್ಗೊಳ್ಳಲು ಸೂಚಿಸಲಾಗಿದ್ದು, ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಲಾಗಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 99015 63260, 91001 24787 ಹಾಗೂ 78926 20675ಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಮನ್ನಳ್ಳಿ ರಸ್ತೆಯಲ್ಲಿರುವ ಕುಂಬಾರವಾಡಾ ಕ್ರಾಸ್ ಹತ್ತಿರವಿರುವ 'ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಸರ್ಕಾರಿ ಐಟಿಐ ಕಾಲೇಜು) ಇಲ್ಲಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.




