Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕನ್ನಡ ನಾಡು, ನುಡಿ ವಿಶೇಷ...

ಬೀದರ್ | ಕನ್ನಡ ನಾಡು, ನುಡಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Nov 2025 5:05 PM IST
share
ಬೀದರ್ | ಕನ್ನಡ ನಾಡು, ನುಡಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬೀದರ್ : ಕನ್ನಡ ನಾಡು, ನುಡಿ, ಸಂಸ್ಕೃತಿ ಸೇರಿದಂತೆ ಎಲ್ಲವೂ ಸಮೃದ್ಧಿಯಾಗಿದೆ ಎಂದು ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇದರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕನ್ನಡ ನಾಡು, ನುಡಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುಣ್ಯವತಿ ವಿಸಾಜಿ, ಕನ್ನಡವನ್ನು ಹೆಚ್ಚಾಗಿ ಬಳಕೆ ಮಾಡಬೇಕು. ಭಾಷೆ ಬಳಕೆ ಮಾಡಿದಷ್ಟು ಬೆಳೆಯುತ್ತದೆ ಎಂದು ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಟಿ.ಎಂ ಮಚ್ಚೆ ಅವರು ಮಾತನಾಡಿ, ಗಡಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನ ಮಾಡಬೇಕು. ಮಿಶ್ರ ಭಾಷೆಯಿಂದ ಕನ್ನಡವನ್ನು ಹೊರತರುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಶ್ರೀ ಸಿದ್ಧರೂಢ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ನಾಗಪ್ಪ ಜಾನಕನೂರ್ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಕನ್ನಡ ನಾಡು ನುಡಿ ಉಳಿಯಬೇಕಾದರೆ ಕನ್ನಡವನ್ನು ಹೆಚ್ಚು ತಂತ್ರಜ್ಞಾನ ಕ್ಷೇತ್ರದಲ್ಲಿ ಬಳಸಬೇಕು. ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಹೇಳಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಡಾ.ಮಕ್ತುಂಬಿ ಎಂ ಮಾತನಾಡಿ, ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಪುಸ್ತಕಗಳನ್ನು ಮಕ್ಕಳಿಗೆ ಕೊಟ್ಟರೆ ಅವರು ಓದುವತ್ತ ಮನಸ್ಸು ಮಾಡುತ್ತಾರೆ. ಒಂದು ಸಲ ಓದುವ ಹವ್ಯಾಸ ಬೆಳೆಸಿಕೊಂಡರೆ ಅವರು ಓದುವುದನ್ನು ಮುಂದುವರೆಸಿಕೊಂಡು ಹೋಗುತ್ತಾರೆ ಎಂದು ಹೇಳಿದರು.

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಮನೋಜಕುಮಾರ್‌ ಕುಲಕರ್ಣಿ ಮಾತನಾಡಿ, ಕನ್ನಡ ಅನ್ಯ ಭಾಷಿಕರಿಗೆ ಕಲಿಸುವುದು ಬಹಳ ಮುಖ್ಯ. ಕನ್ನಡಿಗರು ಕನ್ನಡವನ್ನೇ ಮಾತನಾಡುತ್ತಾರೆ. ಕನ್ನಡ ಜ್ಞಾನದ ಕೊರತೆ ಯಾರಿಗೆ ಇದೆಯೋ ಅವರು ಕನ್ನಡ ಕಲಿಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಶ್ರೀಕಾಂತ್ ಪಾಟೀಲ್, ಡಾ ಮನೋಹರ್‌, ಪ್ರೊ. ಶ್ರೀನಿವಾಸ್‌ ಹಾಗೂ ಪಾರ್ವತಿ ಮೇತ್ರೆ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

BidarKannada
share
ವಾರ್ತಾಭಾರತಿ
ವಾರ್ತಾಭಾರತಿ
Next Story
X