ಬೀದರ್ | ಮುಹಮ್ಮದ್ ಸಲಾವುದ್ದಿನ್ ಫರ್ಹಾನ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೀದರ್ : ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಸ್ಡ್ಂ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್‌ನ ಕಾರ್ಯದರ್ಶಿ ಮುಹಮ್ಮದ್ ಸಲಾವುದ್ದಿನ್ ಫರ್ಹಾನ್ ಅವರಿಗೆ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದ ನೆಹರು ಕ್ರಿಡಾಂಗಣದಲ್ಲಿ ರವಿವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಶಾಸಕ ರಹೀಂ ಖಾನ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಈ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು.
ವಿಸ್ಡ್ಂ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್‌ನ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಮುಹಮ್ಮದ್ ಸಲಾವುದ್ದಿನ್ ಫರ್ಹಾನ್ ಅವರ ಕಾರ್ಯ ವೈಖರಿ ಗಮನಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಸ್ವಿಕರಿಸಿ ಮಾತನಾಡಿದ ಮುಹಮ್ಮದ್ ಸಲಾವುದ್ದಿನ್ ಫರ್ಹಾನ್, ಶಿಕ್ಷಣ ಕ್ಷೇತ್ರದಲ್ಲಿ ನನ್ನ ಸೇವೆ ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರಕಿದ್ದು ನನಗೆ ತುಂಬಾ ಖುಷಿಯ ಸಂಗತಿಯಾಗಿದೆ. ಇದಕ್ಕಾಗಿ ಸಚಿವ ಈಶ್ವರ್ ಖಂಡ್ರೆ, ಶಾಸಕ ರಹೀಂ ಖಾನ್ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.






