ಬೀದರ್ | ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಯೋಜನೆಗಳ ಉಪಯೋಗ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆಗಳ ವಿವರ : ಶ್ರಮಶಕ್ತಿ ಸಾಲದ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಪ್ಯಾಸೆಂಜರ್ ಆಟೋರಿಕ್ಷಾ ಅಥವಾ ಗೂಡ್ಸ್ ವಾಹನ, ಟ್ಯಾಕ್ಸಿ ವಾಹನ ಕರೀದಿಸಲು ಸಹಾಯಧನ ಯೋಜನೆ, ವ್ಯಾಪಾರ ಅಥವಾ ಉದ್ದಿಮೆಗೆ ನೇರ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ, ರೇಷ್ಮೆ ಕೃಷಿ ಪ್ರೋತ್ಸಾಹ ಯೋಜನೆ, ಸಾಂತ್ವಾನಾ ಯೋಜನೆ.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತರರು ಅಂದರೆ ಮುಸ್ಲಿಂ, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ಖ ಪಂಗಡಕ್ಕೆ ಸೇರಿದ್ದು, ವಾರ್ಷಿಕ ಆದಾಯ ನಗರ ಅಭ್ಯರ್ಥಿ 1,03,000 ರೂ. ಹಾಗೂ ಗ್ರಾಮಾಂತರ 81,000 ರೂ.ಗಳ ಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಖಾತೆ ಪಡೆದು ಅರ್ಜಿಯಲ್ಲಿ ನಮೂದಿಸಬೇಕಾಗಿರುತ್ತದೆ. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳಾಗಿರಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಅರ್ಹರು ಅನ್‌ಲೈನ್ ಮೂಲಕ ಅ.10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, 1ನೇ ಮಹಡಿ, ಗುರುನಾನಕ ಝಿರಾ ದಿಂದ ಚಿಕಪೇಟ್ ರಿಂಗ್ ರಸ್ತೆ, ಬೀದರ - 585 402 ಇಲ್ಲಿಗೆ ಅಥವಾ ದರೂವಾಣಿ ಸಂ. 08482-467330 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







